ಇಸ್ತಾಂಬುಲ್: ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ ಹೋಟೆಲ್‌ನಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ದುರಂತರದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. 51 ಮಂದಿ ಗಾಯಗೊಂಡಿದ್ದಾರೆ.
ಶಾಲೆ ಸೆಮಿಸ್ಟರ್ ಹಾಲಿಡೇಸ್ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದಾಗಲೇ ಈ ಘಟನೆ ನಡೆದಿದೆ. 12 ಅಂತಸ್ತಿನ ಹೋಟೆನಲ್ಲಿ 234 ಅತಿಥಿಗಳಿಗೆ ಆತಿಥ್ಯ ವಹಿಸಲಾಗಿತ್ತು. ಸದ್ಯ ತನಿಖೆ ಆರಂಭಿಸಿರುವ ಸ್ಥಳೀಯ ಪೊಲೀಸ್ ಅಧಿಕಾರಿಗಳು ಅಗ್ನಿ ಅವಘಡಕ್ಕೆ ನಿಖರ ಕಾರಣ ಏನೇಂಬುದನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೇ 76 ಶವಗಳನ್ನು ಹೊರತೆಗೆಯಲಾಗಿದ್ದು, 45 ಶವಗಳನ್ನು ಮಾತ್ರ ಗುರುತಿಸಲಾಗಿದೆ. ಉಳಿದ ಶವಗಳ ಗುರುತು ಪತ್ತೆ ಮಾಡುವ ಕೆಲಸವನ್ನೂ ಅಧಿಕಾರಿಗಳು ಮಾಡುತ್ತಿದ್ದಾರೆ.
ರಾಜಧಾನಿ ಅಂಕಾರಾದ ವಾಯುವ್ಯಕ್ಕೆ 170 ಕಿಲೋಮೀಟರ್ (100 ಮೈಲುಗಳು) ದೂರದಲ್ಲಿರುವ ಕರ್ತಲ್ಕಯಾ ರೆಸಾರ್ಟ್‌ಗೆ ಹಲವಾರು ಸಚಿವರು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನೆಗೆ ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ವಿಷಾದ ವ್ಯಕ್ತಪಡಿಸಿದ್ದಾರೆ.
ಮರದಿಂದಲೇ ಮಾಡಲಾಗಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್‌ನಲ್ಲಿ ಬೆಳಗಿನ ಜಾವ 3:27ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಕಿ ಅವಘಡದಿಂದ ಪಾರಾಗಲು ಅನೇಕರು ಹೋಟೆಲ್‌ನ ಕಿಟಕಿಯಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…