ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು ರಾಜೀನಾಮೆ ನೀಡಿದ್ದಾರೆ. ಆದರೆ, ಅವರ ಅವಧಿ ಫೆಬ್ರವರಿಯಲ್ಲಿ ಕೊನೆಗೊಳ್ಳಲಿದ್ದು, ಅಲ್ಲಿಯವರೆಗೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಎಂದು ಮೂಲವೊಂದು ತಿಳಿಸಿರುವ ಬಗ್ಗೆ ʼರಾಯಿಟರ್ಸ್ʼ ವರದಿ ಮಾಡಿದೆ.
ಟಾಟಾ ಗ್ರೂಪ್ ತನ್ನ ವ್ಯವಹಾರಗಳಲ್ಲಿ ಹಲವಾರು ಸವಾಲುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಮತ್ತು ಅವರ ಮರುನೇಮಕಕ್ಕೆ ಸಂಬಂಧಿಸಿ ಟಾಟಾ ಸನ್ಸ್ ಮತ್ತು ಟಾಟಾ ಟ್ರಸ್ಟ್‌ಗಳ ನಡುವಿನ ಭಿನ್ನಾಭಿಪ್ರಾಯದ ಬೆನ್ನಲ್ಲೆ ಈ ಬೆಳವಣಿಗೆ ನಡೆದಿದೆ.
ಟಾಟಾ ಸನ್ಸ್ ಟಾಟಾ ಸಮೂಹದ ಪ್ರಮುಖ ಸಂಸ್ಥೆಯಾಗಿದೆ. ಇದು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS), ಟಾಟಾ ಮೋಟಾರ್ಸ್ ಮತ್ತು ಏರ್ ಇಂಡಿಯಾ ಸೇರಿದಂತೆ 30ಕ್ಕೂ ಹೆಚ್ಚು ಕಂಪೆನಿಗಳನ್ನು ನಿಯಂತ್ರಿಸುತ್ತದೆ.
ಟಾಟಾ ಟ್ರಸ್ಟ್ಸ್ ಅಧ್ಯಕ್ಷ ನೋಯೆಲ್ ಟಾಟಾ ಅವರು ಚಂದ್ರಶೇಖರನ್ ಅವರ ಅಧಿಕಾರಾವಧಿ ವಿಸ್ತರಣೆಗೆ ವಿರೋಧ ವ್ಯಕ್ತಪಡಿಸಿದ ನಂತರ ಟಾಟಾ ಸನ್ಸ್ ಫೆಬ್ರವರಿಯಲ್ಲಿ ಈ ನಿರ್ಧಾರವನ್ನು ಮುಂದೂಡಿತ್ತು ಎಂದು ರಾಯಿಟರ್ಸ್‌ನ ಹಿಂದಿನ ವರದಿ ತಿಳಿಸಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…