ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಬಂಡಾಯ ನಾಯಕರು ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದಾರೆ. ಜೊತೆಗೆ ಮಮತಾ ಬ್ಯಾನರ್ಜಿ ಅವರ ಸೋದರಸಬಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನೂ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಕೋಲ್ಕತ್ತಾದ ನ್ಯೂಟೌನ್‌ನಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ನಡೆದ ಬಂಡಾಯ ಬಣದ ತರಾತುರಿಯ ವಿಶೇಷ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರುತಬ್ರತಾ ಬ್ಯಾನರ್ಜಿ ನೇತೃತ್ವದ ಬಂಡಾಯ ಶಿಬಿರವು ಮಮತಾ ಬ್ಯಾನರ್ಜಿ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಅರೂಪ್ ರಾಯ್ ಅವರನ್ನು ಟಿಎಂಸಿಯ ಹೊಸ ಅಖಿಲ ಭಾರತ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಕಾರ್ಯವೈಖರಿ ವಿರುದ್ಧ ಬಂಡಾಯ ನಾಯಕರು ಅಸಮಾಧಾನಗೊಂಡಿದ್ದರು. ಹೀಗಾಗಿ ಅವರನ್ನು ಪಕ್ಷದಿಂದ ಅಮಾನತುಗೊಳಿಸುವ ನಿರ್ಣಯಕ್ಕೆ ಸರ್ವಾನುಮತ ಸೂಚಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…