ಟಿಕೆಟ್ ಕೊಟ್ಟಿಲ್ಲ ಅಂದ್ರೆ, ಅವರಿಗೆ ಬೇರೆ ಜವಾಬ್ದಾರಿ ನೀಡಲಿದೆ ಅಂತ ಅರ್ಥ: ಅಣ್ಣಾಮಲೈ – Vishwanews24
ಟಿಕೆಟ್ ಕೊಟ್ಟಿಲ್ಲ ಅಂದ್ರೆ, ಅವರಿಗೆ ಬೇರೆ ಜವಾಬ್ದಾರಿ ನೀಡಲಿದೆ ಅಂತ ಅರ್ಥ: ಅಣ್ಣಾಮಲೈ
ಬೆಂಗಳೂರು: ಒಬ್ಬರಿಗೆ ಮಾತ್ರ ಟಿಕೆಟ್ ಕೊಡಲು ಸಾಧ್ಯ. ಉಳಿದವರಿಗೆ ಪಕ್ಷ ಸ್ಥಾನಮಾನ ನೀಡಲಿದೆ. ಟಿಕೆಟ್ ಕೊಟ್ಟಿಲ್ಲ ಅಂದ್ರೆ, ಅವರಿಗೆ ಬೇರೆ ಜವಾಬ್ದಾರಿ ನೀಡಲಿದೆ ಅಂತ ಅರ್ಥ ಎಂದು ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಹೇಳಿದ್ದಾರೆ.
ಬಿಜೆಪಿ ಕಚೇರಿ ಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿಪ್ರಾಯ ಸಂಗ್ರಹಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಕೇಂದ್ರದಲ್ಲಿ ನಡ್ಡಾ, ಮೋದಿ , ಅಮಿತ್ ಶಾ ಅವರ ನೇತೃತ್ವದಲ್ಲಿ ಕೂಡ ಸಭೆ ಮಾಡಿ ಟಿಕೆಟ್ ನೀಡಲಾಗಿದೆ. ಎಲ್ಲಾ ರೀತಿಯ ಅಭಿಪ್ರಾಯದ ಮೂಲಕವೇ ಟಿಕೆಟ್ ನೇಡಲಾಗಿದೆ ಎಂದರು.
ಟಿಕೆಟ್ ಸಿಗದಿರೋದಕ್ಕೆ ಬಂಡಾಯ ಆಗಿರೋದು ಸಾಮಾನ್ಯ. ಒಬ್ಬರಿಗೆ ಮಾತ್ರ ಟಿಕೆಟ್ ಕೊಡಲು ಸಾಧ್ಯ. ಉಳಿದವರಿಗೆ ಪಕ್ಷ ಸ್ಥಾನಮಾನ ನೀಡಲಿದೆ. ಟಿಕೆಟ್ ಕೊಟ್ಟಿಲ್ಲ ಅಂದ್ರೆ, ಅವರಿಗೆ ಬೇರೆಯ ಜವಾಬ್ದಾರಿ ನೀಡಲಿದೆ ಅಂತ ಅರ್ಥ. ಕೇಂದ್ರಕ್ಕೆ ಕರೆಸಿಕೊಳ್ಳುವ ಕೆಲಸವೂ ಆಗಬಹುದು ಎಂದು ತಿಳಿಸಿದರು.
ಕುಂದಾಪುರ : ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ನಾಮಪತ್ರ ಸಲ್ಲಿಕೆ – Vishwanews24
