Featured

ಟಿಕೆಟ್​ ಮಿಸ್  – ಬಿಜೆಪಿಗೆ ರಾಜೀನಾಮೆ ಘೋಷಿಸಿದ ಲಕ್ಷ್ಮಣ ಸವದಿ  – Vishwanews24

ಟಿಕೆಟ್​ ಮಿಸ್  – ಬಿಜೆಪಿಗೆ ರಾಜೀನಾಮೆ ಘೋಷಿಸಿದ ಲಕ್ಷ್ಮಣ ಸವದಿ

ಅಥಣಿ,: ಮಾಜಿ ಉಪ ಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ.

ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್​ ಮಿಸ್ ಆಗಿರುವುದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಬೆಳಗಾವಿಯ ಅಥಣಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸವದಿ,ನನಗೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್‌ ಸಿಗುವ ವಿಶ್ವಾಸವಿತ್ತು.ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನನ್ನ ಜತೆ ಹಲವು ಜನರು ಕೆಲಸ ಮಾಡುತ್ತಿದ್ದರು. ಅಥಣಿ ಕ್ಷೇತ್ರದಲ್ಲಿ ಜನರೇ ಹೈಕಮಾಂಡ್‌. ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ. ನಾಳೆ ಸಂಜೆ ಕ್ಷೇತ್ರದ ಜನರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ.

ಟಿಕೆಟ್‌ಗಾಗಿ ನಾನು ಭಿಕ್ಷೆ ಬೇಡಬೇಕಾ? ನನಗೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್‌ ತಪ್ಪಿದೆ. ನಿನಗೆ ಟಿಕೆಟ್​ ಕೊಡುವುದಕ್ಕೆ ಆಗಲ್ಲ ಸುಮ್ಮನೆ ಬಿದ್ದುಕೊಂಡು ಇರು ಎಂದು ಹೇಳಿದ್ರೆ ಕೇಳುತ್ತಿದ್ದೆ.ಸೌಜನ್ಯಕ್ಕಾದರೂ ಮೊದಲು ನನ್ನ ಜೊತೆ ಚರ್ಚೆ ಮಾಡಬೇಕಿತ್ತು. 20 ವರ್ಷದಿಂದ ಬಿಜೆಪಿ ಪಕ್ಷಕ್ಕೆ ನನ್ನಿಂದ ಸಮಸ್ಯೆಯಾಗಿದ್ದರೆ ಕ್ಷಮೆ ಇರಲಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago