ಉಡುಪಿ, : ಉಡುಪಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂನಲ್ಲಿ ರೈಲು ಬರುವ ಸಂದರ್ಭ ನೃತ್ಯ ಮಾಡುತ್ತ ಟಿಕ್ ಟಾಕ್ ವೀಡಿಯೊ ಮಾಡುತ್ತಿದ್ದ ಇಬ್ಬರನ್ನು ರೈಲ್ವೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರೈಲ್ವೆ ಪೊಲೀಸರು ಎ.15ರಂದು ಉಡುಪಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗಳಿಗೆ ದಂಡ ವಿಧಿಸಿದ ನ್ಯಾಯಾಲಯವು ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.
ರೈಲು ಚಲಿಸುವ ಸಂದರ್ಭ ಅಥವಾ ರೈಲ್ವೆ ಟ್ರ್ಯಾಕ್ ಮೇಲೆ ವೀಡಿಯೊ ಮಾಡುವುದು ಅಪಾಯಕಾರಿಯಾಗಿದ್ದು, ಇದರಿಂದ ಹಲವು ಮಂದಿಗೆ ರೈಲು ಢಿಕ್ಕಿ ಹೊಡೆಯುವ ಮೂಲಕ ಅಥವಾ ರೈಲಿನಿಂದ ಬೀಳುವ ಮೂಲಕ ಸಾವನ್ನಪ್ಪಿದ್ದಾರೆ. ಆದುದರಿಂದ ಈ ರೀತಿಯ ಚಟುವಟಿಕೆಗಳು ತಮಗೆ ಹಾನಿ ಮಾಡುವುದರ ಜೊತೆಗೆ ಇತರ ಪ್ರಯಾಣಿಕರಿಗೂ ಅನಾನುಕೂಲತೆಯನ್ನು ಉಂಟು ಮಾಡುತ್ತದೆ.ಈ ರೀತಿ ವೀಡಿಯೊ ಮಾಡುವುದು ರೈಲ್ವೆ ಕಾಯ್ದೆ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…