ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ ( 27) ಮಂಗಳವಾರ(ಜು.2 ರಂದು) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಜೂ.28 ರಂದು ಗಣೇಶ ಪಾವೂರು ಹರೇಕಳ ಕಡೆಯಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ಬೆಳಿಗ್ಗೆ 11.50ರ ಸುಮಾರಿಗೆ ಹರೇಕಳ ಗ್ರಾಮ ಪಂಚಾಯತ್ ಕಚೇರಿಯ ಎದುರುಗಡೆ ಅಪಘಾತ ಸಂಭವಿಸಿದೆ. ಟಿಪ್ಪರ್ ವಾಹನ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಾಲನೆ ನಡೆಸಿ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ತಕ್ಷಣ ಟಿಪ್ಪರ್ ಚಾಲಕ ಸೇರಿದಂತೆ ಸ್ಥಳೀಯರು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಅಡ್ಯಾರ್ ಫಸ್ಟ್ ನ್ಯುರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಂಗಳೂರಿನಲ್ಲಿ ಎ.ಸಿ ಮೆಕ್ಯಾನಿಕ್ ಆಗಿದ್ದ ಗಣೇಶ್, ಮನೆಯ ಹಿರಿಯ ಪುತ್ರನಾಗಿದ್ದು, ಜೀವನಾಧಾರವಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
ಟಿಪ್ಪರ್ ಲಾರಿ ಚಾಲಕ ಮಹಮ್ಮದ್ ಹನೀಫ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…