Featured

ಟಿಪ್ಪರ್‌ – ಸ್ಕೂಟರ್‌ ಅಪಘಾತ : ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು – vishwanews24

ಟಿಪ್ಪರ್‌  ಸ್ಕೂಟರ್‌ ಅಪಘಾತ : ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಳ್ಳಾಲ: ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌ ಆಚಾರ್ಯ ( 27) ಮಂಗಳವಾರ(ಜು.2 ರಂದು) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಜೂ.28 ರಂದು ಗಣೇಶ ಪಾವೂರು ಹರೇಕಳ ಕಡೆಯಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ಬೆಳಿಗ್ಗೆ 11.50ರ ಸುಮಾರಿಗೆ ಹರೇಕಳ ಗ್ರಾಮ ಪಂಚಾಯತ್‌ ಕಚೇರಿಯ ಎದುರುಗಡೆ ಅಪಘಾತ ಸಂಭವಿಸಿದೆ. ಟಿಪ್ಪರ್‌ ವಾಹನ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಾಲನೆ ನಡೆಸಿ ಹಠಾತ್‌ ಬ್ರೇಕ್‌ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಸ್ಕೂಟರ್‌ ಢಿಕ್ಕಿ ಹೊಡೆದು ಸ್ಕೂಟರ್‌ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ತಕ್ಷಣ ಟಿಪ್ಪರ್‌ ಚಾಲಕ ಸೇರಿದಂತೆ ಸ್ಥಳೀಯರು ನಾಟೆಕಲ್‌ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಅಡ್ಯಾರ್‌ ಫಸ್ಟ್‌ ನ್ಯುರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳೂರಿನಲ್ಲಿ ಎ.ಸಿ ಮೆಕ್ಯಾನಿಕ್‌ ಆಗಿದ್ದ ಗಣೇಶ್‌, ಮನೆಯ ಹಿರಿಯ ಪುತ್ರನಾಗಿದ್ದು, ಜೀವನಾಧಾರವಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

ಟಿಪ್ಪರ್‌ ಲಾರಿ ಚಾಲಕ ಮಹಮ್ಮದ್‌ ಹನೀಫ್‌ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago