Featured

ಟಿಪ್ಪರ್‌ ಹಾಗೂ ಬೈಕ್ ಡಿಕ್ಕಿ :  ಬೈಕಿನಲ್ಲಿದ್ದ ನಾಲ್ವರು ದುರ್ಮರಣ – vishwanews24

ಟಿಪ್ಪರ್‌ ಹಾಗೂ ಬೈಕ್ ಡಿಕ್ಕಿ :  ಬೈಕಿನಲ್ಲಿದ್ದ ನಾಲ್ವರು ದುರ್ಮರಣ

ಚಿಕ್ಕಬಳ್ಳಾಪುರ: ಟಿಪ್ಪರ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿದೆ.

ಅಜ್ಜವಾರ ಗ್ರಾಮದ ಅಣ್ಣ ತಮ್ಮಂದಿರಾದ ನರಸಿಂಹಮೂರ್ತಿ ಹಾಗೂ ನಂದೀಶ್ ಸೇರಿದಂತೆ ಅರುಣ್, ಮನೋಜ್ ಮೃತಪಟ್ಟಿದ್ದಾರೆ. ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್‌ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು.

ಮೃತ ನಾಲ್ವರು ಯುವಕರು ನರಸಿಂಹಮೂರ್ತಿಗೆ ಸೇರಿದ ಸಿಟಿ 100 ಬೈಕಿನಲ್ಲಿ ಹೊರಟಿದ್ದು ಇನ್ನೇನು ಅಜ್ಜವಾರ ಗ್ರಾಮಕ್ಕೆ ಹೈವೇಯಿಂದ ಬಲತಿರುವು ಪಡೆದುಕೊಳ್ಳಬೇಕಿತ್ತು. ಅಷ್ಟರಲ್ಲೇ ಯಮಸ್ವರೂಪಿಯಂತೆ ಟಿಪ್ಪರ್ ಲಾರಿ ಅಡ್ಡ ಬಂದಿದ್ದು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು ಬೈಕ್‌ ಅಪ್ಪಚ್ಚಿಯಾಗಿದೆ.

ಇಬ್ಬರು ಮಕ್ಕಳನ್ನು ಕಳೆದುಕೊಂಡಿರುವ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಮತ್ತೊಂದೆಡೆ ಮೃತ ನರಸಿಂಹಮೂರ್ತಿ ಕಳೆದ ಆರು ತಿಂಗಳ ಹಿಂದೆಯಷ್ಟೇ ಪ್ರೇಮ ವಿವಾಹವಾಗಿದ್ದರು.

ಅಪಘಾತದ ವಿಚಾರ ತಿಳಿದು ಸ್ಥಳಕ್ಕೆ ಎಸ್‌ಪಿ ಕುಶಲ್ ಚೌಕ್ಸಿ ಸೇರಿದಂತೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ಮಾಡಿ ಮೃತ ದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.

ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಸದ್ಯ ಟಿಪ್ಪರ್ ವಶಕ್ಕೆ ಪಡೆದಿರುವ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಒಂದೇ ಗ್ರಾಮದ ನಾಲ್ವರು ಯುವಕರ ಸಾವಿನಿಂದ ಇಡೀ ಗ್ರಾಮದಲ್ಲಿ ಸೂತಕದ ವಾತಾವರಣ ಮನೆ ಮಾಡಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago