ಉಡುಪಿ

ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ದೇವರೇ ನನ್ನನ್ನು ತಡೆದರು : ಪ್ರಮೋದ್ ಮಧ್ವರಾಜ್

ಉಡುಪಿ: ಚರ್ಚ್ ನಾಶ ಮಾಡಿದ್ದಂತಹ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ದೇವರೇ ನನ್ನನ್ನು ತಡೆದರು’ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್  ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದೆ.

ಡಿ.10ರಂದು ಬ್ರಹ್ಮಾವರದ ಪೇತ್ರಿ ಸೇಂಟ್ ಪೀಟರ್ಸ್ ಚರ್ಚ್‌ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಮೋದ್‌ ಮಧ್ವರಾಜ್‌ ಈ ಹೇಳಿಕೆ ನೀಡಿದ್ದರು. ‘ಟಿಪ್ಪು ಸುಲ್ತಾನ್ ಸೈನ್ಯ ಪೇತ್ರಿ ಚರ್ಚ್‌ ಮೇಲೆ ದಾಳಿ ಮಾಡಿ ನಾಶಮಾಡಿತ್ತು ಎಂಬ ಅಂಶ ಇತಿಹಾಸದಲ್ಲಿದೆ. ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದ್ದು ಸರಿಯೋ ತಪ್ಪೊ ಗೊತ್ತಿಲ್ಲ. ಆದರೆ, ಟಿಪ್ಪು ಜಯಂತಿಯಲ್ಲಿ ಭಾಗವಹಿಸಲು ಅವಕಾಶ ಸಿಗಲಿಲ್ಲ’ ಎಂದು ಮಧ್ವರಾಜ್ ಹೇಳಿರುವುದು ವಿಡಿಯೋದಲ್ಲಿದೆ.

‘ವಿರೋಧವಿದ್ದರೂ ಕೂಡ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಿರುವುದು ಸರಿಯೋ ತಪ್ಪೋ ಗೊತ್ತಿಲ್ಲ. ಆದರೆ ಟಿಪ್ಪು ಸೈನ್ಯ ಪೇತ್ರಿಯ ಹಿಂದಿನ ಚರ್ಚ್ ನಾಶ ಮಾಡಿದ್ದಕ್ಕಾಗಿ ನಾನು ಶಾಸಕ ಹಾಗೂ ಮಂತ್ರಿಯಾಗಿದ್ದಾಗ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ದೇವರು ಮಾಡಿದ್ದಾರೆ ಎಂದು ಭಾಷಣದಲ್ಲಿ ಪ್ರಮೋದ್ ಹೇಳಿದ್ದರು. ಯಾವುದೇ ವರ್ಷವೂ ಕೂಡ ಟಿಪ್ಪು ಜಯಂತಿಯಲ್ಲಿ ಭಾಗವಹಿಸಲು ನನಗೆ ಅವಕಾಶವೇ ಸಿಕ್ಕಿರಲಿಲ್ಲ ಎಂದಿದ್ದಾರೆ.

ಕಾಂಗ್ರೇಸ್ ಸರ್ಕಾರ ಆಡಳಿತ ಇದ್ದಾಗ ನಡೆದ ಮೂರು ಟಿಪ್ಪು ಜಯಂತಿಯಲ್ಲೂ ಪ್ರಮೋದ್ ಮಧ್ವರಾಜ್ ಭಾಗವಹಿಸಿರಲಿಲ್ಲ. ಈ ಧೋರಣೆ ಅವರ ಪಕ್ಷದವರೂ ಸೇರಿದಂತೆ ಮುಸ್ಲೀಂ ಸಮುದಾಯದ ಮುಖಂಡರ ಮುನಿಸಿಗೂ ಕಾರಣವಾಗಿತ್ತು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago