ಉಡುಪಿ: ಚರ್ಚ್ ನಾಶ ಮಾಡಿದ್ದಂತಹ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ದೇವರೇ ನನ್ನನ್ನು ತಡೆದರು’ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದೆ.
ಡಿ.10ರಂದು ಬ್ರಹ್ಮಾವರದ ಪೇತ್ರಿ ಸೇಂಟ್ ಪೀಟರ್ಸ್ ಚರ್ಚ್‌ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಮೋದ್ ಮಧ್ವರಾಜ್ ಈ ಹೇಳಿಕೆ ನೀಡಿದ್ದರು. ‘ಟಿಪ್ಪು ಸುಲ್ತಾನ್ ಸೈನ್ಯ ಪೇತ್ರಿ ಚರ್ಚ್ ಮೇಲೆ ದಾಳಿ ಮಾಡಿ ನಾಶಮಾಡಿತ್ತು ಎಂಬ ಅಂಶ ಇತಿಹಾಸದಲ್ಲಿದೆ. ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದ್ದು ಸರಿಯೋ ತಪ್ಪೊ ಗೊತ್ತಿಲ್ಲ. ಆದರೆ, ಟಿಪ್ಪು ಜಯಂತಿಯಲ್ಲಿ ಭಾಗವಹಿಸಲು ಅವಕಾಶ ಸಿಗಲಿಲ್ಲ’ ಎಂದು ಮಧ್ವರಾಜ್ ಹೇಳಿರುವುದು ವಿಡಿಯೋದಲ್ಲಿದೆ.
‘ವಿರೋಧವಿದ್ದರೂ ಕೂಡ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಿರುವುದು ಸರಿಯೋ ತಪ್ಪೋ ಗೊತ್ತಿಲ್ಲ. ಆದರೆ ಟಿಪ್ಪು ಸೈನ್ಯ ಪೇತ್ರಿಯ ಹಿಂದಿನ ಚರ್ಚ್ ನಾಶ ಮಾಡಿದ್ದಕ್ಕಾಗಿ ನಾನು ಶಾಸಕ ಹಾಗೂ ಮಂತ್ರಿಯಾಗಿದ್ದಾಗ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ದೇವರು ಮಾಡಿದ್ದಾರೆ ಎಂದು ಭಾಷಣದಲ್ಲಿ ಪ್ರಮೋದ್ ಹೇಳಿದ್ದರು. ಯಾವುದೇ ವರ್ಷವೂ ಕೂಡ ಟಿಪ್ಪು ಜಯಂತಿಯಲ್ಲಿ ಭಾಗವಹಿಸಲು ನನಗೆ ಅವಕಾಶವೇ ಸಿಕ್ಕಿರಲಿಲ್ಲ ಎಂದಿದ್ದಾರೆ.
ಕಾಂಗ್ರೇಸ್ ಸರ್ಕಾರ ಆಡಳಿತ ಇದ್ದಾಗ ನಡೆದ ಮೂರು ಟಿಪ್ಪು ಜಯಂತಿಯಲ್ಲೂ ಪ್ರಮೋದ್ ಮಧ್ವರಾಜ್ ಭಾಗವಹಿಸಿರಲಿಲ್ಲ. ಈ ಧೋರಣೆ ಅವರ ಪಕ್ಷದವರೂ ಸೇರಿದಂತೆ ಮುಸ್ಲೀಂ ಸಮುದಾಯದ ಮುಖಂಡರ ಮುನಿಸಿಗೂ ಕಾರಣವಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…