Featured

ಟಿಪ್ಪು ಜಯಂತಿಯನ್ನು ಮತ್ತೆ ಆಚರಿಸಿ ತೋರಿಸುತ್ತೇವೆ : ಮಾಜಿ ಸಿಎಂ. ಸಿದ್ದರಾಮಯ್ಯ – Vishwanews24

ಬಾಗಲಕೋಟೆ: ‘ಬಿಜೆಪಿಯವರ ಢೋಂಗಿ ಬೆದರಿಕೆಗೆ ನಾವು ಸೊಪ್ಪು ಹಾಕುವುದಿಲ್ಲ, ಟಿಪ್ಪು ಜಯಂತಿಯನ್ನು ಮತ್ತೆ ಆಚರಿಸಿ ತೋರಿಸುತ್ತೇವೆ’ ಎಂದು ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ದರಾಮಯ್ಯ ಸವಾಲು ಹಾಕಿದರು.

ಜಿಲ್ಲೆಯ ಬಾದಾಮಿಯಲ್ಲಿ ಅಂಜುಮನ್‌ ಶಿಕ್ಷಣ ಸಂಸ್ಥೆಯಿಂದ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ‘ಟಿಪ್ಪು ಜಯಂತಿಗೆ ಢೋಂಗಿ ಬಿಜೆಪಿಯವರು ವಿರೋಧ ಒಡ್ಡುತ್ತಾರೆ. ಎಲ್ಲ ಧರ್ಮಗಳ ನಾಯಕರಾಗಿದ್ದ ಟಿಪ್ಪು ಶೃಂಗೇರಿ ಶಾರದಾಂಬೆ ದೇವಾಲಯಕ್ಕೂ ಕೊಡುಗೆ ನೀಡಿದ್ದಾರೆ. ಟಿಪ್ಪು ಆಸ್ಥಾನದಲ್ಲಿ ದಿವಾನರಾಗಿದ್ದ ಪೂರ್ಣಯ್ಯ ಬ್ರಾಹ್ಮಣರು, ಕೃಷ್ಣರಾವ್‌ ಹಣಕಾಸು ಸಚಿವರಾಗಿದ್ದರು. ಟಿಪ್ಪು ದೇಶ ಹಾಗೂ ಸ್ವಾತಂತ್ರ್ಯ ಪ್ರೇಮಿಯಾಗಿದ್ದಾರೆ. ಯಾರು ಹೇಳಿದರೂ ನಾವು ಕೇಳುವುದಿಲ್ಲ, ಇತರ ಜಯಂತಿಗಳನ್ನು ಆಚರಿಸಿದಂತೆ ಟಿಪ್ಪು ಜಯಂತಿ ನಡೆಸುತ್ತೇವೆ. ಟಿಪ್ಪು ಮತಾಂಧನಲ್ಲ’ ಎಂದು ಸಮರ್ಥಿಸಿಕೊಂಡರು.

ನಾನು ಸಿಎಂ ಆಗಿದ್ದರೆ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೆರವು : ‘ನಾನು ಮುಖ್ಯಮಂತ್ರಿಯಿದ್ದಾಗ ಅಲ್ಪಸಂಖ್ಯಾತ ಸಮುದಾಯಕ್ಕೆ 400 ಕೋಟಿ ರೂ.ಗಳಷ್ಟಿದ್ದ ಅನುದಾನವನ್ನು 3, 100 ಕೋಟಿ ರೂ.ಗಳಿಗೆ ಹೆಚ್ಚಿಸಿದೆ. ಇನ್ನೂ ಮುಖ್ಯಮಂತ್ರಿಯಾಗಿ ಮುಂದುವರಿದಿದ್ದರೆ ಅನುದಾನ 10 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸುತ್ತಿದ್ದೆ. ಶಾದಿ ಭಾಗ್ಯ ಯೋಜನೆ ಜಾರಿಗೊಳಿಸಿದಾಗ ಬಿಜೆಪಿಯವರು ಪ್ರತಿಭಟಿಸಿದರು.

“ಸಿದ್ದರಾಮಯ್ಯ ಮುಸಲ್ಮಾನರ ಪರ ಎಂದು ಬಿಜೆಪಿಯವರು ನನ್ನನ್ನು ಬ್ರ್ಯಾಂಡ್‌ ಮಾಡಲು ಯತ್ನಿಸಿದರು, ನಾನು ಇದಕ್ಕೆಲ್ಲ ಹೆದರುವುದಿಲ್ಲ. ನಾನು ಹಿಂದು, ಮುಸ್ಲಿಂ ಸೇರಿದಂತೆ ಸಮಾಜದ ಬಡವರ ಪರವಾಗಿದ್ದೇನೆ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎನ್ನುವ ಬಿಜೆಪಿ ಶೇ.14 ರಷ್ಟಿರುವ ಮುಸ್ಲಿಮರು, ಶೇ.2 ರಷ್ಟಿರುವ ಕ್ರಿಶ್ಚಿಯನ್‌ರನ್ನು ಮರೆತಿದೆ. ಒಬ್ಬ ಹಿಂದುವಿಗೆ ಕಾಯಿಲೆ ಬಂದಾಗ ಮುಸ್ಲಿಂ ವ್ಯಕ್ತಿ ರಕ್ತ ನೀಡಿದರೆ ಬೇಡ ಎನ್ನುತ್ತೀವಾ?. ಧರ್ಮಗಳ ಮಧ್ಯೆ ಗೋಡೆ ಕಟ್ಟುವ ಕೆಲಸ ಮಾಡಬಾರದು. ನಾನು ಬದುಕಬೇಕು, ಬೇರೆಯವರೂ ಬದುಕಬೇಕು ಎಂಬ ಭಾವನೆಯಿರಬೇಕು. ದೇಶದ ಸಂಪತ್ತು ಒಂದು ಧರ್ಮದವರಿಗೆ ಸೇರಿಲ್ಲ, ಅದು ಎಲ್ಲ ಧರ್ಮದವರದ್ದಾಗಿದೆ’ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago