Featured

ಟಿಪ್ಪು ಜಯಂತಿಯ ಆಚರಣೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ,ನಾವು ಆಚರಣೆ ಮಾಡೇ ಮಾಡ್ತೆವೆ : ಜಮೀರ್ ಅಹಮದ್ ಖಾನ್ -Vishwanews24

ಬೆಂಗಳೂರು: ಬಿಜೆಪಿ ಸರ್ಕಾರ ಟಿಪ್ಪು ಜಯಂತಿಯ ಆಚರಣೆಯನ್ನು ರದ್ದುಗೊಳಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಟಿಪ್ಪು ಜಯಂತಿಯ ಆಚರಣೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ನಾವು ಆಚರಣೆ ಮಾಡೇ ಮಾಡ್ತೆವೆ ಎಂದು ಸಿಎಂ ವಿರುದ್ಧ ಗುಡುಗಿದ್ದಾರೆ.

ಸುದ್ದಿಗಾರರೊಂದಿಗೆ ಮತನಾಡಿದ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಟಿಪ್ಪು ಜಯಂತಿಯನ್ನು ಬಿಜೆಪಿ ರದ್ದು ಮಾಡುತ್ತದೆ ಎಂದು ಗೊತ್ತಿತ್ತು. ಆದರೆ ಇಷ್ಟು ಬೇಗ ರದ್ದು ಮಾಡುತ್ತದೆ ಎಂದು ಗೊತ್ತಿರಲಿಲ್ಲ. ರದ್ದು ಪಡಿಸುವ ಪ್ರಕ್ರಿಯೆಗೆ ಕ್ಯಾಬಿನೆಟ್‌ನಲ್ಲಿ ನಿರ್ಧಾರ ಆಗಬೇಕು. ಆ ನಿರ್ಧಾರದ ಮೇಲೆ ರದ್ದು ಪಡಿಸಬೇಕಾಗುತ್ತದೆ ಆದರೆ ಇವರು ಹೇಗೆ ರದ್ದು ಪಡಿಸಿದ್ದಾರೆ ಎಂಬುವುದು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಹೇಗೆ ನಿಷೇಧ ಮಾಡಿದ್ದೀರಿ ಎಂದು ರೋಷನ್‌ ಬೇಗ್ ಕೇಳಬೇಕು. ಕಾಂಗ್ರೆಸ್ ಬಿಟ್ಟು ಬಿಜೆಪಿ ಹೋಗ್ತಿದ್ದಾರೆ. ಎಲ್ಲಾ ಧರ್ಮದವರು ಟಿಪ್ಪು ಜಯಂತಿ ಆಚರಿಸಿಕೊಂಡು ಬಂದಿದ್ದಾರೆ. ಎಲ್ಲಾ ಕಡೆ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಇನ್ನೂ ಮುಂದೆ ಮತ್ತಷ್ಟು ಜೋರಾಗಿ ಆಚರಿಸುತ್ತೇವೆ ಎಂದರು.

ಈ ಹಿಂದೆ ಕೊಡಗಿನಲ್ಲಿ ಟಿಪ್ಪು ಜಯಂತಿಯಿಂದ ಹಲವಾರು ಗಲಭೆಗಳು ಸೃಷ್ಠಿಯಾಗಿದ್ದು, ಈ ಕಾರಣದಿಂದಾಗಿ ಅಲ್ಲಿನ ಶಾಸಕ ಬೋಪಯ್ಯನವರು ಟಿಪ್ಪು ಜಯಂತಿಯನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಬೋಪಯ್ಯನವರ ಮನವಿಗೆ ಸ್ಪಂದಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪನವರು ಟಿಪ್ಪು ಜಯಂತಿ ರದ್ದುಗೊಳಿಸಿ ಎಂದು ಆದೇಶ ಹೊರಡಿಸಿದ್ಧಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago