ಬೆಂಗಳೂರು: ಬಿಜೆಪಿ ಸರ್ಕಾರ ಟಿಪ್ಪು ಜಯಂತಿಯ ಆಚರಣೆಯನ್ನು ರದ್ದುಗೊಳಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಟಿಪ್ಪು ಜಯಂತಿಯ ಆಚರಣೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ನಾವು ಆಚರಣೆ ಮಾಡೇ ಮಾಡ್ತೆವೆ ಎಂದು ಸಿಎಂ ವಿರುದ್ಧ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮತನಾಡಿದ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಟಿಪ್ಪು ಜಯಂತಿಯನ್ನು ಬಿಜೆಪಿ ರದ್ದು ಮಾಡುತ್ತದೆ ಎಂದು ಗೊತ್ತಿತ್ತು. ಆದರೆ ಇಷ್ಟು ಬೇಗ ರದ್ದು ಮಾಡುತ್ತದೆ ಎಂದು ಗೊತ್ತಿರಲಿಲ್ಲ. ರದ್ದು ಪಡಿಸುವ ಪ್ರಕ್ರಿಯೆಗೆ ಕ್ಯಾಬಿನೆಟ್‌ನಲ್ಲಿ ನಿರ್ಧಾರ ಆಗಬೇಕು. ಆ ನಿರ್ಧಾರದ ಮೇಲೆ ರದ್ದು ಪಡಿಸಬೇಕಾಗುತ್ತದೆ ಆದರೆ ಇವರು ಹೇಗೆ ರದ್ದು ಪಡಿಸಿದ್ದಾರೆ ಎಂಬುವುದು ಗೊತ್ತಿಲ್ಲ ಎಂದು ಹೇಳಿದ್ದಾರೆ.
ಹೇಗೆ ನಿಷೇಧ ಮಾಡಿದ್ದೀರಿ ಎಂದು ರೋಷನ್ ಬೇಗ್ ಕೇಳಬೇಕು. ಕಾಂಗ್ರೆಸ್ ಬಿಟ್ಟು ಬಿಜೆಪಿ ಹೋಗ್ತಿದ್ದಾರೆ. ಎಲ್ಲಾ ಧರ್ಮದವರು ಟಿಪ್ಪು ಜಯಂತಿ ಆಚರಿಸಿಕೊಂಡು ಬಂದಿದ್ದಾರೆ. ಎಲ್ಲಾ ಕಡೆ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಇನ್ನೂ ಮುಂದೆ ಮತ್ತಷ್ಟು ಜೋರಾಗಿ ಆಚರಿಸುತ್ತೇವೆ ಎಂದರು.
ಈ ಹಿಂದೆ ಕೊಡಗಿನಲ್ಲಿ ಟಿಪ್ಪು ಜಯಂತಿಯಿಂದ ಹಲವಾರು ಗಲಭೆಗಳು ಸೃಷ್ಠಿಯಾಗಿದ್ದು, ಈ ಕಾರಣದಿಂದಾಗಿ ಅಲ್ಲಿನ ಶಾಸಕ ಬೋಪಯ್ಯನವರು ಟಿಪ್ಪು ಜಯಂತಿಯನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಬೋಪಯ್ಯನವರ ಮನವಿಗೆ ಸ್ಪಂದಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪನವರು ಟಿಪ್ಪು ಜಯಂತಿ ರದ್ದುಗೊಳಿಸಿ ಎಂದು ಆದೇಶ ಹೊರಡಿಸಿದ್ಧಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…