Featured

ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಿ : ಸಿಎಂಗೆ ಬಿಜೆಪಿ ಶಾಸಕ ಬೋಪಯ್ಯ -Vishwanews24

ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಿದ್ದ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುವಂತೆ ವಿರಾಜಪೇಟೆಯ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಟಿಪ್ಪು ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಲು ಆರಂಭವಾದಾಗಿನಿಂದ ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಸಾವು-ನೋವು ಸಂಭವಿಸಿವೆ. ಸರ್ಕಾರಿ ಆಸ್ತಿಪಾಸ್ತಿಗೆ ಹಾನಿಯಾಗುತ್ತಿದೆ. ಹೀಗಾಗಿ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ನಿರ್ಧರಿಸಿ, ಈ ಸಂಬಂಧ ಆದೇಶ ಹೊರಡಿಸಲಾಯಿತು. ಇದು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿತ್ತು.

ಬಿಜೆಪಿ ಕಾರ್ಯಕ್ರಮವನ್ನು ಬಹಿಷ್ಕರಿಸಿ ಪ್ರತಿಭಟನೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿತ್ತು. ಆದರೆ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿಯನ್ನು ಆಚರಿಸುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ. ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕೂಡ ಟಿಪ್ಪು ಜಯಂತಿಯನ್ನು ಮುಂದುವರಿಸಿದ್ದರು. ಇದೀಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಈ ಹಿಂದೆಯೇ ಬಿಜೆಪಿ ಮುಖಂಡರು, ಪಕ್ಷ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದುಪಡಿಸುವುದಾಗಿ ಹೇಳಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago