ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಿದ್ದ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುವಂತೆ ವಿರಾಜಪೇಟೆಯ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಟಿಪ್ಪು ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಲು ಆರಂಭವಾದಾಗಿನಿಂದ ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಸಾವು-ನೋವು ಸಂಭವಿಸಿವೆ. ಸರ್ಕಾರಿ ಆಸ್ತಿಪಾಸ್ತಿಗೆ ಹಾನಿಯಾಗುತ್ತಿದೆ. ಹೀಗಾಗಿ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ನಿರ್ಧರಿಸಿ, ಈ ಸಂಬಂಧ ಆದೇಶ ಹೊರಡಿಸಲಾಯಿತು. ಇದು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿತ್ತು.
ಬಿಜೆಪಿ ಕಾರ್ಯಕ್ರಮವನ್ನು ಬಹಿಷ್ಕರಿಸಿ ಪ್ರತಿಭಟನೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿತ್ತು. ಆದರೆ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿಯನ್ನು ಆಚರಿಸುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ. ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೂಡ ಟಿಪ್ಪು ಜಯಂತಿಯನ್ನು ಮುಂದುವರಿಸಿದ್ದರು. ಇದೀಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಈ ಹಿಂದೆಯೇ ಬಿಜೆಪಿ ಮುಖಂಡರು, ಪಕ್ಷ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದುಪಡಿಸುವುದಾಗಿ ಹೇಳಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…