ಬೆಂಗಳೂರು : ದ್ವೇಷ ರಾಜಕಾರಣ ಮಾಡುವುದಿಲ್ಲವೆಂದು ಹೇಳಿದ 24 ಗಂಟೆಯೊಳಗೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಟಿಪ್ಪು ಜಯಂತಿಯನ್ನು ರದ್ದು ಮಾಡುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ವಚನ ಭಷ್ಟ್ರರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದೆ.
ಸಿಎಂ ಯಡಿಯೂರಪ್ಪ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಟಿಪ್ಪು ಜಯಂತಿ ರದ್ದು ಮಾಡಿದ್ದು ಅಪರಾಧ. ಟಿಪ್ಪು ಸುಲ್ತಾನ್ ಒಬ್ಬ ಅಲ್ಪಸಂಖ್ಯಾತ. ಮೈಸೂರು ರಾಜ್ಯದಲ್ಲಿ ರಾಜನಾಗಿ ಬ್ರಿಟಿಷರ ವಿರುದ್ಧ ಹೋರಾಡಿದವನು ಟಿಪ್ಪು. ಈ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಅವರ ಜಯಂತಿಯನ್ನು ಆಚರಣೆ ಮಾಡಲು ತೀರ್ಮಾನ ಮಾಡಿದ್ದೆವು. ಇತಿಹಾಸದ ಅರಿವಿಲ್ಲದ ಬಿಜೆಪಿಯವರು ದುರುದ್ದೇಶದಿಂದ ಅಲ್ಪಸಂಖ್ಯಾತರ ದ್ವೇಷದಿಂದ ಈ ರೀತಿ ಮಾಡಿದ್ದಾರೆ ಎಂದು ಹರಿಹಾಯ್ದರು.
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಟಿಪ್ಪು ಜಯಂತಿಯನ್ನು ರದ್ದು ಮಾಡಿ ನೂತನ ಬಿಜೆಪಿ ಸರ್ಕಾರ ಆದೇಶಿದೆ. ಈ ಕುರಿತು ಮಾತನಾಡಿರುವ ಸಿಎಂ ಯಡಿಯೂರಪ್ಪ, ಹಿಂದೆಲ್ಲಾ ಟಿಪ್ಪು ಜಯಂತಿ ಸಂದರ್ಭದಲ್ಲಿ ಅಲ್ಲಲ್ಲಿ ಗಲಾಟೆ, ಘರ್ಷಣೆಗಳಾಗಿತ್ತು. ಅದು ಪುನರಾವರ್ತನೆಯಾಗಬಾರದೆಂದು ಶಾಸಕರ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಯಂತಿ ಆಚರಣೆ ರದ್ದು ಮಾಡಲು ಮುಂದಾಗಿವೆ ಎಂದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…