Featured

ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿರುವುದು ಅಪರಾಧ : ಸಿದ್ದರಾಮಯ್ಯ -Vishwanews24

ಬೆಂಗಳೂರು : ದ್ವೇಷ ರಾಜಕಾರಣ ಮಾಡುವುದಿಲ್ಲವೆಂದು ಹೇಳಿದ 24 ಗಂಟೆಯೊಳಗೆ ಕಾಂಗ್ರೆಸ್​ ಸರ್ಕಾರ ಜಾರಿಗೆ ತಂದ ಟಿಪ್ಪು ಜಯಂತಿಯನ್ನು ರದ್ದು ಮಾಡುವ ಮೂಲಕ ಸಿಎಂ ಬಿಎಸ್​ ಯಡಿಯೂರಪ್ಪ ವಚನ ಭಷ್ಟ್ರರಾಗಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಕಿಡಿಕಾರಿದೆ. 

ಸಿಎಂ ಯಡಿಯೂರಪ್ಪ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಟಿಪ್ಪು ಜಯಂತಿ ರದ್ದು ಮಾಡಿದ್ದು ಅಪರಾಧ. ಟಿಪ್ಪು ಸುಲ್ತಾನ್ ಒಬ್ಬ ಅಲ್ಪಸಂಖ್ಯಾತ. ಮೈಸೂರು ರಾಜ್ಯದಲ್ಲಿ ರಾಜನಾಗಿ ಬ್ರಿಟಿಷರ ವಿರುದ್ಧ ಹೋರಾಡಿದವನು ಟಿಪ್ಪು. ಈ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಅವರ ಜಯಂತಿಯನ್ನು ಆಚರಣೆ ಮಾಡಲು ತೀರ್ಮಾನ ಮಾಡಿದ್ದೆವು. ಇತಿಹಾಸದ ಅರಿವಿಲ್ಲದ ಬಿಜೆಪಿಯವರು ದುರುದ್ದೇಶದಿಂದ ಅಲ್ಪಸಂಖ್ಯಾತರ ದ್ವೇಷದಿಂದ ಈ ರೀತಿ ಮಾಡಿದ್ದಾರೆ ಎಂದು ಹರಿಹಾಯ್ದರು.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಟಿಪ್ಪು ಜಯಂತಿಯನ್ನು ರದ್ದು ಮಾಡಿ ನೂತನ ಬಿಜೆಪಿ ಸರ್ಕಾರ ಆದೇಶಿದೆ. ಈ ಕುರಿತು ಮಾತನಾಡಿರುವ ಸಿಎಂ ಯಡಿಯೂರಪ್ಪ,  ಹಿಂದೆಲ್ಲಾ ಟಿಪ್ಪು ಜಯಂತಿ ಸಂದರ್ಭದಲ್ಲಿ ಅಲ್ಲಲ್ಲಿ ಗಲಾಟೆ, ಘರ್ಷಣೆಗಳಾಗಿತ್ತು. ಅದು ಪುನರಾವರ್ತನೆಯಾಗಬಾರದೆಂದು ಶಾಸಕರ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಯಂತಿ ಆಚರಣೆ ರದ್ದು ಮಾಡಲು ಮುಂದಾಗಿವೆ ಎಂದಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago