ಬೆಂಗಳೂರು,:ಟಿಪ್ಪುಜಯಂತಿಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ಹೋರಾಟಕ್ಕಿಳಿಯಲು ಮುಂದಾಗಿದೆ.
ಕಳೆದ ಐದಾರು ವರ್ಷಗಳಿಂದಲೂ ನಿರಂತರವಾಗಿ ನಡೆದು ಬರುತ್ತಿದ್ದ ಟಿಪ್ಪುಜಯಂತಿಯನ್ನು ರದ್ದುಗೊಳಿಸುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಬ್ರಾತೃತ್ವ, ಭಾವೈಕ್ಯತೆಗೆ ಧಕ್ಕೆಯುಂಟು ಮಾಡಿದೆ.
ಜತೆಗೆ ದ್ವೇಶದ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಳೆದ ಒಂದು ವಾರದಿಂದ ರಾಜಕೀಯ ಬೆಳವಣಿಗೆಗಳಲ್ಲಿ ಮುಳುಗಿದ್ದ ಕಾಂಗ್ರೆಸ್ ಇಂದು ಕೆಪಿಸಿಸಿಯಲ್ಲಿ ಮಹತ್ವದ ಸಭೆ ನಡೆಸಿತು.
ರಾಜೀನಾಮೆ ನೀಡಿ ಪಕ್ಷಾಂತರ ಮಾಡಿರುವ 17 ಮಂದಿ ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಲು ಕಾರ್ಯಯೋಜನೆ ರೂಪಿಸುತ್ತಿರುವ ಕಾಂಗ್ರೆಸ್ ಅದೇ ಸಮಯದಲ್ಲಿ ಟಿಪ್ಪು ಜಯಂತಿ ರದ್ದುಗೊಳಿಸಿರುವ ನಿರ್ಧಾರವನ್ನು ಪ್ರತಿಭಟಿಸುವ ಮೂಲಕ ಬಿಜೆಪಿ ಸರ್ಕಾರಕ್ಕೆ ಟಾಂಗ್ ನೀಡಲು ಮುಂದಾಗಿದೆ.
ಇಂದು ನಡೆದ ಸಭೆಯಲ್ಲಿ ಬಹುತೇಕ ನಾಯಕರು ಟಿಪ್ಪು ಜಯಂತಿ ರದ್ದುಗೊಳಿಸಿರುವುದನ್ನು ಪ್ರಬಲವಾಗಿ ವಿರೋಧಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…