ಬೆಂಗಳೂರು,: ಟಿಪ್ಪು ಜಯಂತಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ತ್ರಿವಳಿ ತಲಾಖ್ ಬಗ್ಗೆ ಮೌನವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು, ಹಿರಿಯ ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಈಶ್ವರಪ್ಪ ಬರೆದುಕೊಂಡಿದ್ದು ಹೀಗೆ, ” ಶಾದಿಭಾಗ್ಯ’ವನ್ನು ಶಾಶ್ವತವಾಗಿ ಉಳಿಸುವ ಟ್ರಿಪಲ್ ತಲಾಕ್ ಬಿಲ್ ರಾಜ್ಯಸಭೆಯಲ್ಲಿ ಪಾಸ್ ಆಗಿ 12 ಗಂಟೆಗಳು ಕಳೆದರೂ, ಮಾಜಿ ಮುಖ್ಯಮಂತ್ರಿಗಳ ಜಾಣ ಕಿವುಡು ಕೆಲಸ ಮಾಡಿದೆ”.
“ಮತಾಂಧನ ಜಯಂತಿ ರದ್ದು ಮಾಡಿದಾಗ ಉಕ್ಕಿ ಬಂದ ರೋಷಾವೇಷಗಳು, ಮುಸ್ಲಿಂ ಮಹಿಳೆಯರ ಗೌರವ ಉಳಿಸುವ ಟ್ರಿಪಲ್ ತಲಾಕ್ ಬಿಲ್ ಪಾಸ್ ಆದ ಕೂಡಲೇ ತಣ್ಣಗಾಗಿದೆ” ಈಶ್ವರಪ್ಪ ಟ್ವೀಟ್ ಮಾಡಿದ್ದಾರೆ.
“ದ್ವೇಷ ರಾಜಕಾರಣ ಮಾಡುವುದಿಲ್ಲವೆಂದು ಹೇಳಿ 24 ಗಂಟೆಯೊಳಗೆ ದ್ವೇಷ ರಾಜಕಾರಣ ಮಾಡಿದ ವಚನ ಭ್ರಷ್ಟ @BSYBJP. ಕೇವಲ ಕೋಮುವಾದ ದೃಷ್ಟಿಕೋನದಿಂದಲೇ ಇತಿಹಾಸವನ್ನು ನೋಡುವ ಬಿಜೆಪಿ/ಆರೆಸ್ಸೆಸ್ ಇತಿಹಾಸವನ್ನು, ಟಿಪ್ಪುವಿನ ಕೊಡುಗೆಯನ್ನು ಓದಿ ತಿಳಿದುಕೊಳ್ಳಬೇಕಿದೆ” ಎಂದು ಕೆಪಿಸಿಸಿ ಟ್ವೀಟ್ ಮಾಡಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…