ಮೈಸೂರು : ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಸಂಸದ ಪ್ರತಾಪ್ ಸಿಂಹಗೆ ಮಾಡಲು ಕೆಲಸವಿಲ್ಲ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಹೇಳಿದರು.
ಭಾರತ್ ಸ್ಕೌಟ್ಸ್ ಮೈದಾನದಲ್ಲಿ 408ನೇ ದಸರಾ ಮಹೋತ್ಸವದ ಹಿನ್ನಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಆಹಾರ ಮೇಳ ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಂಸದ ಪ್ರತಾಪ್ ಸಿಂಹಗೆ ಕೆಲಸವಿಲ್ಲ. ಹಾಗಾಗಿ ಇಂತಹ ಮಾತುಗಳನ್ನು ಆಡುತ್ತಾರೆ. ಟಿಪ್ಪು ಜಯಂತಿ ನಿಲ್ಲಿಸಲು ಸಾಧ್ಯವಿಲ್ಲ. ಕಳೆದ ಮೂರು ವರ್ಷಗಳಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಯಾವುದೇ ಕಾರಣಕ್ಕೂ ನಿಲ್ಲಿಸಲು ಸಾಧ್ಯವಿಲ್ಲ. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಪ್ರತಾಪ್ ಸಿಂಹ ರಾಜಕೀಯಕ್ಕಾಗಿ ಇಂತಹ ಮಾತುಗಳನ್ನು ಆಡುತ್ತಿದ್ದಾರೆ ಎಂದ ಅವರು, ಮುಸ್ಲಿಮರನ್ನು ವಿರೋಧಿಸಿದರೆ ಬೇರೆ ಮತಗಳು ಒಂದಾಗಲಿವೆ ಎಂಬ ಭ್ರಮೆ ಅವರಲ್ಲಿದೆ. ಚುನಾವಣೆಯಲ್ಲಿ ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…