ಬೆಂಗಳೂರು: ಮೈಸೂರು ಹುಲಿ ಎಂದೇ ಕರೆಯಲಾಗುವ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ರದ್ದುಗೊಳಿಸಿ ನೂತನ ಸಿಎಂ ಬಿ.ಎಸ್ ಯಡಿಯೂರಪ್ಪನವರು ಆದೇಶ ಹೊರಡಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಜಾರಿಗೊಳಿಸಿದ್ದ ಟಿಪ್ಪು ಜಯಂತಿ ಆಚರಣೆಯನ್ನು ಬಿಜೆಪಿ ಸರ್ಕಾರ ಬಂದ ಕೂಡಲೇ ರದ್ದುಗೊಳಿಸಿದೆ. ಮಾಜಿ ಸ್ಪೀಕರ್ ಬೋಪಯ್ಯನವರು ಟಿಪ್ಪು ಜಯಂತಿಯನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಬೋಪಯ್ಯನವರ ಮನವಿಗೆ ಸ್ಪಂದಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪನವರು ಟಿಪ್ಪು ಜಯಂತಿ ರದ್ದುಗೊಳಿಸಿ ಆದೇಶ ಹೊರಡಿಸಿದ್ಧಾರೆ.
ಸಿದ್ದರಾಮಯ್ಯ ನೇತೃತ್ವ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ್ದ ಟಿಪ್ಪು ಜಯಂತಿಯನ್ನು ಹಿಂದಿನ ಸಿಎಂ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವೂ ಮುಂದುವರೆಸಿತ್ತು. ಟಿಪ್ಪು ಜಯಂತಿ ಆಚರಣೆ ಕೈಬಿಡಬೇಕೆಂದು ಬಿಜೆಪಿ ಮುಖಂಡರು ಸರಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಆದರೆ, ಕರ್ನಾಟಕ ಸರ್ವಜನಾಂಗದ ಶಾಂತಿ ತೋಟ ಎಂದು ಕುವೆಂಪು ಹೇಳಿದ್ಧಾರೆ. ಅದರಂತೆಯೇ ಟಿಪ್ಪು ಜಯಂತಿ ಆಚರಿಸಿದ್ದೇವೆ ಎಂದು ಸಮಜಾಯಿಷಿಯೂ ನೀಡಿದ್ದರು.
2018ರ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸುವುದಾಗಿ ಹೇಳಿತ್ತು. ಅಷ್ಟೇ ಅಲ್ಲದೇ ಸರ್ಕಾರದ ವತಿಯಿಂದಲೇ ಟಿಪ್ಪು ಜಯಂತಿ ಆಚರಿಸುತ್ತಿರುವ ಬಗ್ಗೆ ಬಿಜೆಪಿ ನಾಯಕರು ಪ್ರತಿಭಟಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…