ಬೆಂಗಳೂರು, : ಟಿಪ್ಪು ಜಾತ್ಯಾತೀತ ದೊರೆ ಹಾಗೂ ಒಬ್ಬ ಜನನಾಯಕ ಆಗಿದ್ದ. ಇತಿಹಾಸ ಪುರುಷರನ್ನು ಧರ್ಮದ ಆಧಾರದ ಮೇಲೆ ದ್ವೇಷಿಸುವ ಆರ್.ಎಸ್.ಎಸ್‌ನವರ ಮಾತುಗಳಿಗೆ ‘ಐ ಡೋಂಟ್ ಕೇರ್’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಟಿಪ್ಪು ಜಯಂತಿ ಪ್ರಯುಕ್ತ ಶುಭಕೋರಲು ಮಾಜಿ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ತಮ್ಮ ನಿವಾಸಕ್ಕೆ ಮುಸ್ಲಿಂ ಮುಖಂಡರು ಆಗಮಿಸಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, “ಟಿಪ್ಪು ಜಾತ್ಯಾತೀತ ದೊರೆ ಹಾಗೂ ಒಬ್ಬ ಜನನಾಯಕ ಆಗಿದ್ದ. ಟಿಪ್ಪು ಒಬ್ಬ ಹಿಂದೂ ವಿರೋಧಿಯಾಗಿದ್ದರೆ ತನ್ನ ಆಸ್ಥಾನದಲ್ಲಿ ಹಿಂದೂಗಳನ್ನು ದೀವಾನರಾಗಿ, ಮಂತ್ರಿಗಳಾಗಿ ಇಟ್ಟುಕೊಳ್ಳುತ್ತಿದ್ದನೇ?. ಉಳುವವನೇ ಭೂಮಿಯ ಒಡೆಯ ಕಾನೂನನ್ನು ಮೊದಲಿಗೆ ಜಾರಿಗೆ ತಂದಿದ್ದು ಹೈದರಾಲಿ. ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್. ಹೀಗೆ ನಾಡಿಗೆ ಟಿಪ್ಪು ಮತ್ತು ಹೈದರಾಲಿ ಕೊಡುಗೆ ಅಪಾರವಾದುದ್ದು” ಎಂದಿದ್ದಾರೆ.
“ಟಿಪ್ಪು ಎಲ್ಲೆಲ್ಲಿ ಮಸೀದಿ ಕಟ್ಟಿಸಿದ್ದರೋ ಅದರ ಪಕ್ಕದಲ್ಲೇ ದೇವಸ್ಥಾನಗಳನ್ನೂ ಕಟ್ಟಿಸುತ್ತಿದ್ದರು ಎನ್ನುವುದಕ್ಕೆ ದಾಖಲೆಗಳಿವೆ. ಧರ್ಮದ ಕಾರಣಕ್ಕೆ ಟಿಪ್ಪುವನ್ನು ವಿರೋಧಿಸುವ ಆರ್‌ಎಸ್‌ಎಸ್ ಎಂದಾದರೂ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದೆಯೇ? ಬ್ರಿಟಿಷರ ವಿರುದ್ಧ ಹೋರಾಟದಲ್ಲಿ ಯಾರಾದರೂ ಆರ್‌ಎಸ್‌ಎಸ್ ನವರು ಪ್ರಾಣ ಬಿಟ್ಟ ಉದಾಹರಣೆಗೆ ಇದೆಯಾ?” ಎಂದು ಪ್ರಶ್ನಿಸಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…