ಉಡುಪಿ: ಟಿಪ್ಪು ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ. ಅದು ದೇವರಿಗೆ ಮಾಡುವ ಅಪಮಾನ. ಇದರಿಂದ ದೇವರ ಶಕ್ತಿ ಕಡಿಮೆಯಾಗುತ್ತದೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
ಶೃಂಗೇರಿಯ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ನಡೆಯುವ ಸಲಾಂ ಆರತಿ ಪೂಜೆಗೆ ಸಂಬಂಧಿಸಿದಂತೆ ಉಡುಪಿಯ ಬೈಂದೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಲಾಂ ತೆಗೆದು ದೇವರ ಹೆಸರಿನಲ್ಲಿ ಪೂಜೆ ಮಾಡಿ ಎಂದು ಆಗ್ರಹಿಸಿದ್ದಾರೆ.
ಟಿಪ್ಪು ನಮ್ಮ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾನೆ. ಹಿಂದೂ ಸಮಾಜವನ್ನು ನಾಶ ಮಾಡಿದ್ದಾನೆ. ಇಂತಹ ಒಬ್ಬ ವ್ಯಕ್ತಿಯ ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ. ಅದು ದೇವರಿಗೆ ಮಾಡುವಂತಹ ಅಪಮಾನ. ಸಲಾಂ ಹೆಸರನ್ನು ಎಷ್ಟು ಬೇಗ ತೆಗೆದು ಹಾಕುತ್ತಾರೋ ಅಷ್ಟು ಶ್ರೇಯಸ್ಸು. ಇಲ್ಲದಿದ್ದರೆ ದೇವರ ಶಕ್ತಿ ಕಡಿಮೆಯಾಗುತ್ತದೆ ಎಂದು ತಿಳಿಸಿದ್ದಾರೆ.
ಶೀಘ್ರವಾಗಿ ಸಲಾಂ ತೆಗೆದು, ದೇವರ ಹೆಸರಿನಲ್ಲಿ ಪೂಜೆ ಮಾಡಲಿ. ಸಲಾಂ ಇನ್ನೂ ಸ್ವಲ್ಪ ವರ್ಷ ಕಳೆದರೆ, ಅಲ್ಲಾಹು ಸಲಾಂ ಎಂದು ಬರುವ ಸಾಧ್ಯತೆ ಇದೆ. ಅವರಲ್ಲಿ ಬೇಕಾದರೆ ಮಾಡಲಿ, ನಮ್ಮಲ್ಲಿ ಬೇಡ. ನಮ್ಮ ದೇವಸ್ಥಾನದಲ್ಲಿ ನಮ್ಮ ನಮ್ಮತನ ಇರಬೇಕು. ಹಿಂದೂ ದೇವರಿಗೆ ಇಂತಹ ಸಲಾಂ ಪೂಜೆ ನಡೆಯಬಾರದು ಎಂದು ಕಿಡಿ ಕಾರಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…