Featured

ಟೀಮ್ ಇಂಡಿಯಾಗೆ ಆಯ್ಕೆಯಾದ ಉಡುಪಿಯ ಕಾಪು ಮೂಲದ ತನುಷ್ ಕೋಟ್ಯಾನ್ – vishwanews24

ಅಶ್ವಿನ್ ನಿವೃತ್ತಿಯಿಂದ ತೆರವಾದ ಸ್ಥಾನದಲ್ಲಿ ಟೀಮ್ ಇಂಡಿಯಾಗೆ ಎಂಟ್ರಿಕೊಟ್ಟ ಕಾಪು ಮೂಲದ ತನುಷ್ ಕೋಟ್ಯಾನ್

ಮುಂಬಯಿ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ತನುಷ್ ಕೋಟ್ಯಾನ್ ಎಂಬ ಯುವ ಆಟಗಾರ ಆಯ್ಕೆ ಆಗಿದ್ದಾರೆ. ಈ ಹಿಂದೆ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಮುಂಬಯಿ ಆಟಗಾರ ಇದೀಗ ರವಿಚಂದ್ರನ್ ಅಶ್ವಿನ್ ಅವರ ನಿವೃತ್ತಿಯಿಂದ ತೆರವಾದ ಸ್ಥಾನದಲ್ಲಿ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ತನುಷ್‌ ಕೋಟ್ಯಾನ್‌ ಹೆತ್ತವರು ಉಡುಪಿಯ ಕಾಪು ಮೂಲದವರು.

ತನುಷ್‌ ಕೋಟ್ಯಾನ್‌ ಹುಟ್ಟಿ ಬೆಳೆದದ್ದೆಲ್ಲ ಮುಂಬಯಿಯಲ್ಲಿ.ತನುಷ್ ಕೋಟ್ಯಾನ್ ವಯಸ್ಸು ಕೇವಲ 26. ಬಲಗೈ ಸ್ಪಿನ್ನರ್, ಬಲಗೈ ಬ್ಯಾಟ್ಸ್‌ಮನ್‌. ಕಳೆದ ಕೆಲ ವರ್ಷಗಳಿಂದ ಮುಂಬಯಿ ತಂಡದ ಖಾಯಂ ಸದಸ್ಯ. ಇದೀಗ ರವಿಚಂದ್ರನ್ ಅಶ್ವಿನ್ ಅವರಿಂದ ತೆರವಾಗಿರುವ ಸ್ಥಾನದಲ್ಲಿ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ.

ತನುಷ್ ಕೋಟ್ಯಾನ್ ಕುಟುಂಬಸ್ಥರು ಕಾಪು ಮೂಲದವರಾಗಿದ್ದರೂ, ಅವರು ಬೆಳೆದಿದ್ದು ಮುಂಬಯಿಯಲ್ಲಿ. ಹೀಗಾಗಿ ಮುಂಬಯಿಯಲ್ಲೇ ಕ್ರಿಕೆಟ್ ಕೆರಿಯರ್ ಕೂಡ ಶುರುವಾಯಿತು. ಬಾಲ್ಯದಿಂದಲೇ ಆಲ್ ರೌಂಡರ್ ಆಟದೊಂದಿಗೆ ಗಮನ ಸೆಳೆದ ತನುಷ್​ಗೆ ಮುಂಬಯಿ ಕಿರಿಯರ ತಂಡದಲ್ಲಿ ಸ್ಥಾನ ಸಿಗಲು ಹೆಚ್ಚೇನು ಸಮಯವಾಗಲಿಲ್ಲ. 2018ರಲ್ಲಿ, ಅಂದರೆ 20ನೇ ವಯಸ್ಸಿನಲ್ಲಿ ಮುಂಬಯಿ ಪರ ಕಣಕ್ಕಿಳಿದ ತನುಷ್ ಆ ಬಳಿಕ ಹಿಂತಿರುಗಿ ನೋಡಿಲ್ಲ. ಆಲ್ ರೌಂಡರ್ ಆಟದೊಂದಿಗೆ ತಂಡದಲ್ಲಿ ಖಾಯಂ ಸ್ಥಾನ ಪಡದುಕೊಂಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಜಯ ಹಜಾರೆ ಟೂರ್ನಿಯಲ್ಲೂ ಮುಂಬಯಿ ತಂಡದ ಭಾಗವಾಗಿದ್ದಾರೆ.

ತನುಷ್ ಕೋಟ್ಯಾನ್ ಮುಂಬಯಿ ಪರ ಈವರೆಗೆ 33 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ.ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡುವ ಅವರು 41.21ರ ಸರಾಸರಿಯಲ್ಲಿ 1525 ರನ್ ಗಳಿಸಿದ್ದಾರೆ. ಹಾಗೆಯೇ 25.70 ಸರಾಸರಿಯಲ್ಲಿ 101 ವಿಕೆಟ್‌ಗಳನ್ನು ಪಡೆದು ಮಿಂಚಿದ್ದಾರೆ. ಅವರ ಬ್ಯಾಟ್​ನಿಂದ 2 ಭರ್ಜರಿ ಶತಕ ಮತ್ತು 13 ಅರ್ಧ ಶತಕಗಳು ಮೂಡಿಬಂದಿವೆ.

2023-24ರಲ್ಲಿ ಮುಂಬಯಿ ತಂಡ ರಣಜಿ ಟ್ರೋಫಿ ಗೆಲ್ಲುವಲ್ಲಿ ತನುಷ್ ಕೋಟ್ಯಾನ್ ಪ್ರಮುಖ ಪಾತ್ರವಹಿಸಿದ್ದರು. ಈ ಟೂರ್ನಿಯಲ್ಲಿ 41.83 ಸರಾಸರಿಯಲ್ಲಿ 502 ರನ್ ಗಳಿಸಿದ್ದಲ್ಲದೆ 29 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದರು. ಈ ಮೂಲಕ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

ಇರಾನಿ ಕಪ್​​ನಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ 27 ವರ್ಷಗಳ ನಂತರ ಮುಂಬಯಿ ತಂಡ ಪ್ರಶಸ್ತಿ ಗೆಲ್ಲುವಲ್ಲಿಯೂ ಪ್ರಮುಖ ಪಾತ್ರವಹಿಸಿದ್ದರು. ಹಾಗೆಯೇ ದುಲೀಪ್ ಟ್ರೋಫಿಯಲ್ಲಿ ಭಾರತ ಎ ತಂಡದ ಪರ ಕಣಕ್ಕಿಳಿದಿದ್ದ ತನುಷ್ 3 ಪಂದ್ಯಗಳಲ್ಲಿ 10 ವಿಕೆಟ್ ಕಬಳಿಸಿ ಮಿಂಚಿದ್ದರು.
ಈ ಎಲ್ಲಾ ಭರ್ಜರಿ ಪ್ರದರ್ಶನದ ಫಲವಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ ಅವರ ಸ್ಥಾನದಲ್ಲಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅದರಂತೆ ಮೆಲ್ಬೋರ್ನ್ ಹಾಗೂ ಸಿಡ್ನಿಯಲ್ಲಿ ನಡೆಯಲಿರುವ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ತನುಷ್ ಕೋಟ್ಯಾನ್ ಆಡಲಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago