ನವದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ‘ಟೂಲ್ ಕಿಟ್‘ ಹಂಚಿದ ಪ್ರಕರಣದ ಸಹ ಆರೋಪಿ ನಿಕಿತಾ ಜೇಕಬ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡಲು ದೆಹಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಪೊಲೀಸರಿಗೆ ಒಂದು ವಾರ ಕಾಲಾವಕಾಶ ನೀಡಿದೆ.
ನಿಕಿತಾ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸುವ ವೇಳೆ, ‘ಜೇಕಬ್ ಅವರು ಸಲ್ಲಿಸಿರುವ ಮನವಿಗೆ ವಿವರವಾದ ಉತ್ತರ ನೀಡಲು ತನಿಖಾ ಸಂಸ್ಥೆಗೆ ಸಮಯ ಬೇಕಾಗುತ್ತದೆ‘ ಎಂದು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಮಾರ್ಚ್ 9ರವರೆಗೆ ಕಾಲಾವಕಾಶ ನೀಡಿ ಆದೇಶಿಸಿದರು. ಇದೇ ದಿನ, ಈ ಪ್ರಕರಣದ ಮತ್ತೊಬ್ಬ ಸಹ ಆರೋಪಿ ಶಾಂತನು ಮುಲುಕ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನೂ ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ.
ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ನಡೆದ ವಿಚಾರಣೆ ವೇಳೆ, ಜೇಕಬ್ ಪರವಾಗಿ ಹಾಜರಾದ ಹಿರಿಯ ವಕೀಲೆ ರೆಬೆಕಾ ಜಾನ್, ‘ನಾನು ಇಲ್ಲಿ ಜೇಕಬ್ ಪರ ವಾದ ಮಾಡುತ್ತಿದ್ದೇನೆಯೇ ಹೊರತು ಶಾಂತನು ಮುಲುಕ್ ಪರ ಅಲ್ಲ‘ ಎಂದು ಸ್ಪಷ್ಟಪಡಿಸಿದರು.
ನ್ಯಾಯಾಲಯ, ಮಾರ್ಚ್ 9ರಂದು ರೆಬೆಕಾ ಅವರು ತಮ್ಮ ವಾದ ಮಂಡಿಸಬಹುದು ಎಂದು ಹೇಳಿತು. ಹಾಗೆಯೇ, ಜೇಕಬ್ ನಿರೀಕ್ಷಣಾ ಜಾಮೀನು ಅರ್ಜಿ ಕುರಿತು ಪೊಲೀಸರು ನ್ಯಾಯಾಲಯಕ್ಕೆ ನೀಡುವ ಪ್ರತಿಕ್ರಿಯೆಯ ಒಂದು ಪ್ರತಿಯನ್ನು, ಅವರ ಪರ ವಕೀಲರಿಗೆ ನೀಡುವಂತೆ ನ್ಯಾಯಾಲಯ ನಿರ್ದೇಶನ ನೀಡಿತು.
ಪುತ್ತೂರು: ಮಹಿಳಾ ಎಸ್.ಐ ಮೇಲೆ ಹಲ್ಲೆ ಪ್ರಕರಣ ; ಇಬ್ಬರು ಸಹೋದರಿಯರ ಬಂಧನ -Vishwanews24
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…