ಟೆಸ್ಟ್‌ ಕ್ರಿಕೆಟ್‌ ನಾಯಕತ್ವಕ್ಕೆ ಗುಡ್‌ ಬೈ ಹೇಳಿದ ವಿರಾಟ್‌ ಕೋಹ್ಲಿ -Vishwanews24

Featured, ರಾಷ್ಟ್ರ ನ್ಯೂಸ್

ಟೆಸ್ಟ್‌ ಕ್ರಿಕೆಟ್‌ ನಾಯಕತ್ವಕ್ಕೆ ಗುಡ್‌ ಬೈ ಹೇಳಿದ ವಿರಾಟ್‌ ಕೋಹ್ಲಿ -Vishwanews24

ನವದೆಹಲಿ, : ವಿರಾಟ್‌ ಕೋಹ್ಲಿ ಅವರು ಭಾರತೀಯ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಶನಿವಾರ ಘೋಷಿಸಿದ್ದಾರೆ.

ಈ ಕುರಿತು ತಮ್ಮ ಟ್ವಿಟರ್‌ ಪೇಜ್‌ನಲ್ಲಿ ಅಧಿಕೃತವಾಗಿ ಬರೆದುಕೊಂಡಿರುವ ಅವರು, ನಾನು ಕೆಲಸವನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ಮಾಡಿದ್ದೇನೆ ತಂಡವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ಇದು 7 ವರ್ಷಗಳ ಕಠಿಣ ಪರಿಶ್ರಮ ಪಟ್ಟಿದ್ದೇನೆ. ನಾನು ಮಾಡುವ ಪ್ರತಿಯೊಂದರಲ್ಲೂ ನನ್ನ 120 ಪ್ರತಿಶತವನ್ನು ನೀಡುತ್ತೇನೆ. ಆದರೆ ನಾನು ಅದನ್ನು ಮಾಡಲು ಸಾಧ್ಯವಾಗದಿದ್ದರೆ, ಅದು ಸರಿಯಾದ ಕೆಲಸವಲ್ಲ ಎಂದು ನನಗೆ ತಿಳಿದಿದೆ. ನನ್ನ ಹೃದಯದಲ್ಲಿ ಸಂಪೂರ್ಣ ಸ್ಪಷ್ಟತೆ ಇದೆ ಮತ್ತು ನನ್ನ ತಂಡಕ್ಕೆ ನಾನು ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ಇನ್ನು ಇಷ್ಟು ದೀರ್ಘಾವಧಿಯವರೆಗೆ ನನ್ನ ದೇಶವನ್ನು ಮುನ್ನಡೆಸಲು ನನಗೆ ಅವಕಾಶ ನೀಡಿದ ಬಿಸಿಸಿಐಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ನೀವು ಈ ಪ್ರಯಾಣವನ್ನು ಸುಂದರಗೊಳಿಸಿದ್ದೀರಿ. ಕೊನೆಯದಾಗಿ ನಾಯಕನಾಗಿ ನನ್ನನ್ನು ನಂಬಿದ ಎಂಎಸ್ ಧೋನಿಗೆ ದೊಡ್ಡ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

Leave a Reply