ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸರ್ವಿಸ್ ರಸ್ತೆಯಲ್ಲಿ ಎಕ್ಸ್ ಪ್ರೆಸ್ ಬಸ್ ಚಾಲಕರ ರಂಪಾಟ ಮತ್ತೆ ಮುಂದುವರೆದಿದೆ.
ಸೋಮವಾರ (ಆ.10) ಬೆಳಗ್ಗೆ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಎರಡು ಎಕ್ಸ್ ಪ್ರೆಸ್ ಬಸ್‌ಗಳ ಚಾಲಕರು ಬಸ್‌ಗಳನ್ನು ರಸ್ತೆಯಲ್ಲಿ ನಿಲ್ಲಿಸಿ ಪರಸ್ಪರ ವಾಗ್ವಾದ ನಡೆಸಿ ಸ್ಥಳೀಯರಲ್ಲಿ ಆತಂಕದ ವಾತಾವರಣ ಮೂಡಿಸಿದ್ದಾರೆ.
ಟೈಮಿಂಗ್ ವಿಚಾರದಲ್ಲಿ ಬಸ್ ಚಾಲಕರು ಮತ್ತು ನಿರ್ವಾಹಕರು ಬಸ್‌ನೊಳಗೆ ಜಗಳ ಮಾಡಿದ್ದು, ಬಳಿಕ ಬಸ್‌ನಿಂದ ಕೆಳಗಿಳಿದು ಪ್ರಯಾಣಿಕರ ಎದುರಲ್ಲೇ ವಾಗ್ವಾದ ಮುಂದುವರಿಸಿದ್ದಾರೆ.
ಸ್ಥಳೀಯರು ಮತ್ತು ರಿಕ್ಷಾ ಚಾಲಕರು ಅವರನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದರಾದರು ಸುಮಾರು 10 ನಿಮಿಷಗಳ ಕಾಲ ತಮ್ಮ ವಾಗ್ವಾದವನ್ನು ಮುಂದುವರಿಸಿದ್ದಾರೆ.
ಕಾಪು ಸರ್ವಿಸ್ ಬಸ್ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ಚಾಲಕರ ಈ ರೀತಿ ವರ್ತನೆ ನಿರಂತರವಾಗಿ ನಡೆಯುತ್ತಿದ್ದು, ಎರಡು ವಾರದ ಹಿಂದೆ ಇಂತಹ ಘಟನೆ ನಡೆದಾಗ ಪೊಲೀಸರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದರು.
ಇದೀಗ ಮತ್ತೆ ಎರಡು ಬಸ್ ಚಾಲಕರು ಇದೇ ರೀತಿಯ ವರ್ತನೆಯನ್ನು ಮುಂದುವರಿಸಿದ್ದು ಅವರ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳೀಯರು ಮತ್ತು ಬಸ್ ಪ್ರಯಾಣಿಕರು ಆಗ್ರಹಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…