Featured

ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸಿ ಭವಿಷ್ಯ ನಿಧಿ, ಮಾಸಿಕ ಪಿಂಚಣಿ ಯೋಜನೆ ಜಾರಿಗೆ ಆಗ್ರಹ : ಸಿಎಂ ಗೆ ಮನವಿ – Vishwanews24

ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸಿ ಭವಿಷ್ಯ ನಿಧಿ, ಮಾಸಿಕ ಪಿಂಚಣಿ ಯೋಜನೆ ಜಾರಿಗೆ ಆಗ್ರಹ : ಸಿಎಂ ಗೆ ಮನವಿ

ಉಡುಪಿ  : ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸಿ ಆ ಮೂಲಕ ಭವಿಷ್ಯನಿಧಿ ಮತ್ತು ಮಾಸಿಕ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಬಗ್ಗೆ ಮುಖ್ಯಮಂತ್ರಿವರಿಗೆ ಸಲ್ಲಿಸಿದ ಮನವಿಯಲ್ಲಿ, ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಎಂಬ ರಾಜ್ಯಮಟ್ಟದ ಸಂಘಟನೆಯನ್ನು 23 ವರ್ಷಗಳ ಹಿಂದೆ ಸ್ಥಾಪಿಸಲಾಗಿದೆ. ರಾಜ್ಯಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಸ್ತ್ರೀ-ಪುರುಷ ಹೊಲಿಗೆ ಕೆಲಸಗಾರರಿಗೆ ಜೀವನ ಭದ್ರತೆಯನ್ನು ಒದಗಿಸಲು ಟೈಲರ್ಸ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಕಳೆದ 22 ವರ್ಷಗಳಿಂದ ಮನವಿ ಹಾಗೂ ಶಾಂತ ರೀತಿಯ ಚಳುವಳಿಗಳ ಮುಖೇನ ರಾಜ್ಯ ಸರಕಾರವನ್ನು ಒತ್ತಾಯಿಸುತ್ತಾ ಬಂದಿರುತ್ತೇವೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ಟೈಲರ್ ಕ್ಷೇಮನಿಧಿ ಮಂಡಳಿ, ರಚಿಸುವ ಮೂಲಕ ಅಗತ್ಯ ಬೇಡಿಕೆಗಳಾದ ಭವಿಷ್ಯ ನಿಧಿ ಹಾಗೂ ಪಿಂಚಣಿ ಯೋಜನೆ ಜಾರಿ ಗೊಳಿಸಬೇಕು, ಹೊಲಿಗೆ ಕೆಲಸಗಾರರ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ ನೀಡುವುದು, ಹೊಲಿಗೆ ಕೆಲಸಗಾರರಿಗೆ ವಾಸಕ್ಕಾಗಿ ಮನೆ ನಿರ್ಮಾಣ ಅಥವಾ ದುರಸ್ತಿ ಮಾಡಲು ಹಾಗೂ ಹೊಲಿಗೆಯಂತ್ರ ಖರೀದಿಸಲು ಶೇಕಡ 4 ರಷ್ಟು ಬಡ್ಡಿಯಲ್ಲಿ ಸಾಲ ಸೌಲಭ್ಯ ನೀಡುವುದು. ಮತ್ತು ಹೊಲಿಗೆ ಕೆಲಸಗಾರರಿಗೆ ಆರೋಗ್ಯ ವಿಮೆಯನ್ನು ಜಾರಿಗೊಳಿಸಬೇಕು ಎಂಬ ಬೇಡಿಕೆಗಳನ್ನು ಪರಿಶೀಲಿಸಿ ಮಸೂದೆಯಲ್ಲಿ ಸೂಕ್ತ ನಿರ್ಣಯವನ್ನು ರಚಿಸುವ ಮೂಲಕ ಕೂಡಲೇ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರವನ್ನು ಒತ್ತಾಯಿಸಲಾಗಿದೆ.

ಕಾಪುವಿನಲ್ಲಿ ಜನಸಂಕಲ್ಪ ಯಾತ್ರೆ ಉದ್ಘಾಟಿಸಿದ ಮುಖ್ಯಮಂತ್ರಿ ಬೊಮ್ಮಾಯಿ – ಯಡಿಯೂರಪ್ಪ : Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

7 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

8 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

9 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

10 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

10 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

11 hours ago