Featured

ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್​​ ದಾಳಿ : ಪಾಕ್​ ಮಾಧ್ಯಮ ನಿರೂಪಕ – Vishwanews24

ನವದೆಹಲಿ : ಪುಲ್ವಾಮಾ ದಾಳಿ ನಂತರದಲ್ಲಿ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನದಲ್ಲಿರುವ ಭಾರತ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇವುಗಳಲ್ಲಿ ಆಮದು ಸುಂಕ ಏರಿಕೆ, ಪಾಕ್​ಗೆ ನೀರು ಬಿಡುವುದನ್ನು ನಿಲ್ಲಿಸಿದ್ದು, ಟೊಮೊಟೊ ರಫ್ತು ಸ್ಥಗಿತಗೊಳಿಸಿದ್ದು ಪ್ರಮುಖವಾದುದು. ಇದರ ಪರಿಣಾಮ ಪಾಕ್​ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿದ್ದು, ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣು ಬಾಂಬ್​ ದಾಳಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕೋಲಾರದ ಎಪಿಎಂಸಿ ಮಾರುಕಟ್ಟೆ ಏಷ್ಯಾದಲ್ಲಿಯೇ 2ನೇ ಅತಿದೊಡ್ಡ ಟೊಮೆಟೊ ವಹಿವಾಟು ನಡೆಸುವ ಕೇಂದ್ರ. ಕೋಲಾರದಿಂದ ಪಾಕಿಸ್ತಾನಕ್ಕೆ ಟೊಮೆಟೊ ರಫ್ತು ಬಂದ್​ ಮಾಡಲು ಈ​ ಮಾರುಕಟ್ಟೆ ನಿರ್ಧಾರ ಮಾಡಿದೆ. ಇದಕ್ಕೆ ಪಾಕಿಸ್ತಾನ ಮಾಧ್ಯಮಗಳು ಕಿಡಿಕಾರಿವೆ. ಈ ಬಗ್ಗೆ ಆ್ಯಂಕರ್​ ಒಬ್ಬರು ಲೈವ್​ನಲ್ಲಿ ಭಾರತದ ವಿರುದ್ಧ ಹರಿಹಾಯ್ದಿದ್ದಾರೆ.

“ನಾವು ಈ ಟೊಮಾಟೊವನ್ನು ರಾಹುಲ್​ ಅಥವಾ ಮೋದಿ ಅವರ ಮುಖಕ್ಕೆ ಎಸೆಯುತ್ತೇವೆ. ಭಾರತ ಕೊಳಕು ತುಂಬಿದ ರಾಷ್ಟ್ರ. ಟೊಮಾಟೊಗೆ ಪ್ರತಿಯಾಗಿ ಆ್ಯಟಂಬಾಂಬ್​ ಮೂಲಕ ಉತ್ತರ ಕೊಡುವ ಸಮಯ ಬಂದಿದೆ,” ಎಂದು ಪಾಕ್​ ಆ್ಯಂಕರ್​ ಓರ್ವ ಹೇಳಿಕೊಂಡಿದ್ದಾರೆ. ಅಲ್ಲದೆ, ಸಮಯ ಬಂದರೆ ನಾವು ಅಣುಬಾಂಬ್​ ದಾಳಿ ಮಾಡಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

 

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago