ಹೊಸದಿಲ್ಲಿ: ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆಯುವಲ್ಲಿ ಭಾರತೀಯ ಈಜುಗಾರರು ಈ ಬಾರಿ ಭಾರೀ ಸುದ್ದಿ ಮಾಡುತ್ತಿದ್ದಾರೆ. ಸಾಜನ್ ಪ್ರಕಾಶ್, ಶ್ರೀಹರಿ ನಟರಾಜ್ ಬಳಿಕ ಮೂರನೇ ಭಾರತೀಯ ಈಜುಪಟುವಾಗಿ ಮಾನಾ ಪಟೇಲ್ ಆಯ್ಕೆಯಾಗಿದ್ದಾರೆ.
ಮಾನಾ ಪಟೇಲ್ ಯುನಿವರ್ಸಾಲಿಟಿ ಕೋಟಾದಡಿಯಲ್ಲಿ ಸ್ಥಾನ ಸಂಪಾದಿಸಿದ್ದಾರೆ. ಟೋಕಿಯೋ ಒಲಿಂಪಿಕ್ಸ್ ಗೆ ಸ್ಥಾನ ಪಡೆದ ಭಾರತದ ಮೊದಲ ಮಹಿಳಾ ಈಜುಪಟು ಎಂಬ ಸಾಧನೆ ಮಾಡಿದ್ದಾರೆ.
ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರುಈ ಕುರಿತಾಗಿ ಟ್ವಿಟ್ ಮಾಡಿದ್ದು, ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೊದಲ ಮಹಿಳಾ ಮತ್ತು 3ನೇ ಭಾರತೀಯ ಈಜುಗಾರ್ತಿ ಮಾನಾ ಪಟೇಲ್ಗೆ ಶುಭಾಶಯ ಎಂದು ಹೇಳಿದ್ದಾರೆ.
ಒಲಿಂಪಿಕ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತದ ಮೂವರು ಈಜುಪಟುಗಳು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ. 200 ಮೀಟರ್ ಬಟರ್‌ಪ್ಲೈ ವಿಭಾಗದಲ್ಲಿ ಸಾಜನ್ ಪ್ರಕಾಶ್ ನೇರ ಅರ್ಹತೆ ಪಡೆಯುವ ಮೂಲಕ ಸಾಧನೆ ಮಾಡಿದ್ದರು. ನಂತರ ಶ್ರೀಹರಿ ನಟರಾಜ್ ಅವರೂ ಅರ್ಹತೆ ಸಾಧಿಸಿದ್ದರು. ಇದೀಗ ಮಾನಾ ಪಟೇಲ್ ಅವರೂ ಕೂಡ : ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…