ಟೋಕಿಯೋ: ಒಲಿಂಪಿಕ್ಸ್ ಕುಸ್ತಿಯ ಪುರುಷರ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ 23 ವರ್ಷದ ರವಿ ದಹಿಯಾ ಬೆಳ್ಳಿಯನ್ನು ಗೆದ್ದಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತ ಎರಡನೇ ಬೆಳ್ಳಿ ಪದಕವನ್ನು ಗೆದ್ದಂತಾಗಿದೆ.
2 ಬಾರಿ ವಿಶ್ವಚಾಂಪಿಯನ್ ರಷ್ಯಾದ ಚೌರ್ ಉಗುವೆವ್ ವಿರುದ್ಧ 7-4 ಅಂಕಗಳಿಂದ ರವಿ ದಹಿಯಾ ಸೋತು ಎರಡನೇ ಸ್ಥಾನವನ್ನು ಪಡೆದರು. ಉಗುವೆವ್ ಸತತ 16 ಪಂದ್ಯಗಳನ್ನು ಗೆದ್ದು ಒಲಿಂಪಿಕ್ಸ್ ಪ್ರವೇಶಿಸಿದ್ದರು.
ಸೆಮಿಫೈನಲ್‍ನಲ್ಲಿ ಕಝಖಿಸ್ತಾನದ ನುರಿಸ್ಲಾಮ್ ಸನಯೆವ್ ವಿರುದ್ಧ ಆರಂಭಿಕ ಹಿನ್ನಡೆ ಅನುಭವಿಸಿದರೂ ಭರ್ಜರಿ ಕಮ್‍ಬ್ಯಾಕ್ ಮಾಡುವ ಮೂಲಕ ರವಿ ದಹಿಯಾ ರೋಚಕ ಗೆಲುವಿನೊಂದಿಗೆ ಫೈನಲ್ ಅರ್ಹತೆ ಪಡೆದುಕೊಂಡಿದ್ದರು.
ಹರಿಯಾಣದ ಸೋನಿಪತ್ ಜಿಲ್ಲೆಯ ನಹ್ರಿ ಗ್ರಾಮದಲ್ಲಿ ಜನಿಸಿದ ರವಿ ದಹಿಯಾ ಈ ಹಿಂದೆ 2019ರ ವಿಶ್ವ ಚಾಂಪಿಯನ್‍ಷಿಪ್‍ನ 57 ಕೆಜಿ ವಿಭಾಗದಲ್ಲಿ ಕಂಚು, 2020ರ ಏಷ್ಯನ್ ಚಾಂಪಿಯನ್‍ಷಿಪ್‍ನಲ್ಲಿ ಚಿನ್ನ, 2021ರ ಏಷ್ಯನ್ ಚಾಂಪಿಯನ್‍ಷಿಪ್‍ನಲ್ಲಿ ಸ್ವರ್ಣ, 2018ರ ಅಂಡರ್ 23 ಚಾಂಪಿಯನ್‍ಷಿಪ್‍ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…