ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಅವರು ಇತಿಹಾಸ ನಿರ್ಮಿಸಿದ್ದು, ಈ ಹಿಂದೆ ಚಿನ್ನ ಗೆದ್ದಿದ್ದ ಅವನಿ ಇದೀಗ ಮತ್ತೆ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ.
ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಶೂಟಿಂಗ್ ವಿಭಾಗದಲ್ಲಿ ಭಾರತದ ಅವನಿ ಲೇಖರಾ ಕಂಚಿನ ಪದಕ ಜಯಿಸಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಶುಕ್ರವಾರ ನಡೆದ ಆರ್ 8 ಈವೆಂಟ್ ನ ಮಹಿಳೆಯರ 50 ಮೀ ರೈಫಲ್ 3 ಪಿ ಎಸ್‌ಎಚ್ 1 ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದ ಅವನಿ ಲೇಖರಾ ಕಂಚಿನ ಪದಕ ಗೆದ್ದಿದ್ದಾರೆ.
ಈ ಫೈನಲ್ ಪಂದ್ಯದಲ್ಲಿ ಭಾರತದ ಅವನಿ ಲೇಖರಾ ಒಟ್ಟು 445.9ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ. ಅಂತಿಮ ಸುತ್ತು ಆರಂಭಕ್ಕೂ ಮುನ್ನ ಅವನಿ ಕೇವಲ 149.5 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರು. ಆದರೆ ಅಂತಿಮ ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ನೀಡಿ ಮೂರನೇ ಸ್ಥಾನ ಪಡೆದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…