Featured

ಟೋಲ್‌ ವಿರುದ್ಧ ಪ್ರತಿಭಟನೆಗೆ ಬೆಂಬಲ

ಬೆಳ್ಮಣ್: ಸಮ್ಮಿಶ್ರ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಪ್ರಸ್ತುತ ರಾಜ್ಯ ಹೆದ್ದಾರಿಗಳಲ್ಲಿ ವಾಹನ ಸವಾರರಿಂದ ಟೋಲ್ ವಸೂಲಿ ಮಾಡಿ ಖಜಾನೆ ಭರ್ತಿ ಮಾಡುವ ಉದ್ದೇಶ ಹೊಂದಿದೆ ಎಂದು ಕಾರ್ಕಳ ಶಾಸಕ ಸುನೀಲ್‌ಕುಮಾರ್ ಆರೋಪಿಸಿದ್ದಾರೆ.
ಬೆಳ್ಮಣ್‌ನಲ್ಲಿ ನಿರ್ಮಾಣಗೊಳ್ಳಲಿರುವ ಟೋಲ್‌ಗೇಟ್ ವಿರುದ್ಧ ಶುಕ್ರವಾರ ಬೆಳ್ಮಣ್ ಪೇಟೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ನೇತೃತ್ವದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ಅ.15ರಿಂದ ಬೆಳ್ಮಣ್‌ನಲ್ಲಿ ಸಂಪೂರ್ಣ ಸರ್ಕಾರದ ಖರ್ಚಿನಲ್ಲಿ ನಿರ್ಮಾಣಗೊಂಡ ಪಡುಬಿದ್ರಿ-ಕಾರ್ಕಳ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್ ಸಂಗ್ರಹಿಸಿ ರಾಜ್ಯದ ಬೊಕ್ಕಸ ತುಂಬಿಸಲು ಅಸಂವಿಧಾನಿಕ ಕ್ರಮಕ್ಕೆ ಮುಂದಾಗಿದೆ. ಈಗಾಗಲೇ ರಾಜ್ಯಾದ್ಯಂತ 1000 ವೈನ್‌ಶಾಪ್‌ಗಳನ್ನು ತೆರೆಯಲುದ್ದೇಶಿಸಿದ್ದ ಸರ್ಕಾರ ಪೆಟ್ರೋಲ್‌ಗೆ ಲೀಟರ್ ಒಂದಕ್ಕೆ 2ರೂ., ಸೆಸ್ ವಿಧಿಸಲು ತೀರ್ಮಾನಿಸಿದ್ದು ಸಾಮಾನ್ಯ ವರ್ಗದ ಜನರು ಸಂಕಟ ಅನುಭವಿಸುವಂತಾಗಿದೆ ಎಂದರು.

ಪ್ರತಿಭಟನೆಗೆ ಬೆಂಬಲ: ನ್ಯಾಯಯುತ ಹೋರಾಟಕ್ಕೆ ಈ ಭಾಗದ ಶಾಸಕನಾಗಿ ಸದಾ ಜನರ ಜತೆ ಸ್ಪಂದಿಸುವುದಾಗಿ ತಿಳಿಸಿದ ಸುನೀಲ್, ಅ.7ರಂದು ಸಾರ್ವಜನಿಕವಾಗಿ ಟೋಲ್ ವಿರುದ್ಧ ನಡೆಯುವ ಸಾರ್ವಜನಿಕರ ಹೋರಾಟಕ್ಕೂ ತನ್ನ ಸಂಪೂರ್ಣ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ ಉಪಾಧ್ಯಕ್ಷ ಬೋಳ ಸದಾಶಿವ ಶೆಟ್ಟಿ, ಕ್ಷೇತ್ರ ಕಾರ್ಯದರ್ಶಿ ನವೀನ್ ನಾಯಕ್, ಜಿಪಂ ಸದಸ್ಯೆ ರೇಷ್ಮಾ ಉದಯ ಶೆಟ್ಟಿ, ಪಡುಬಿದ್ರಿ ಬಿಜೆಪಿ ನಾಯಕ ಪ್ರಕಾಶ್ ಶೆಟ್ಟಿ, ಸೂರ‌್ಯಕಾಂತ ಶೆಟ್ಟಿ , ಜಿಪಂ ಸದಸ್ಯರಾದ ಸುಮಿತ್ ಶೆಟ್ಟಿ, ಉದಯ ಎಸ್. ಕೋಟ್ಯಾನ್, ಕಾರ್ಕಳ ತಾಪಂ ಅಧ್ಯಕ್ಷೆ ಮಾಲಿನಿ.ಜೆ.ಶೆಟ್ಟಿ, ಉಪಾಧ್ಯಕ್ಷ ಗೋಪಾಲ ಮೂಲ್ಯ, ಸದಸ್ಯರಾದ ಪುಷ್ಪಾ ಸತೀಶ್, ಆಶಾ ದೇವೇಂದ್ರ ಶೆಟ್ಟಿ, ಶಕ್ತಿ ಕೇಂದ್ರ ಅಧ್ಯಕ್ಷ ಬೋಳ ಜಯರಾಮ ಸಾಲ್ಯಾನ್ ವಿವಿಧ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು, ತಾಲೂಕು ಹಾಗೂ ಜಿಲ್ಲಾಮಟ್ಟದ ಪದಾಧಿಕಾರಿಗಳು ಹಾಗೂ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ಇನ್ನಾ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸರ್ಕಾರ ನೇರ ಹೊಣೆ: ಆರ್‌ಎನ್‌ಎಸ್ ಸಂಸ್ಥೆಯವರ ಮೂಲಕ ಕೆಶಿಪ್‌ನ ಮಾರ್ಗದರ್ಶನದಲ್ಲಿ ಸಂಪೂರ್ಣ ಸರ್ಕಾರಿ ವೆಚ್ಚದಲ್ಲಿ ಪೂರ್ಣಗೊಂಡ ಈ ರಸ್ತೆಗೆ ಮೂರುವರೆ ವರ್ಷದ ಬಳಿಕ ಟೋಲ್ ಸಂಗ್ರಹಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ರಸ್ತೆ ನಿರ್ಮಾಣದ ಪೂರ್ವದಲ್ಲಿ ಟೋಲ್ ಸಂಗ್ರಹಿಸುವ ಮೂಲ ಒಪ್ಪಂದವೇ ಇರಲಿಲ್ಲ. ಪ್ರಸ್ತುತ ಯಾವ ಉದ್ದೇಶದಿಂದ ಟೋಲ್ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು ಪ್ರಶ್ನಿಸಿದ ಶಾಸಕರು ಮುಂದಿನ ದಿನದಲ್ಲಿ ಯಾವುದೇ ಅನಾಹುತ ನಡೆದರೂ ಸರ್ಕಾರ ನೇರ ಹೊಣೆಯಾಗುತ್ತದೆ ಎಂದರು.

ಪ್ರತಿಭಟನೆಗೆ ಬೆಂಬಲ: ಬೆಳ್ಮಣ್ ಟೋಲ್ ಗೇಟ್ ವಿರುದ್ಧ ಅ.7ರಂದು ನಡೆಯಲಿರುವ ಪ್ರತಿಭಟನೆಗೆ ಸಾಣೂರು ಯುವಕ ಮಂಡಲ ಬೆಂಬಲ ನೀಡಲಿದೆ ಎಂದು ಮಂಡಲ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಸ್ ಮಾಲೀಕರ ಬೆಂಬಲ: ಟೋಲ್‌ಗೇಟ್ ವಿರುದ್ಧ ನಡೆಯಲಿರುವ ಬೃಹತ್ ಸಾರ್ವಜನಿಕ ಪ್ರತಿಭಟನೆಗೆ ಖಾಸಗಿ ಬಸ್ ಮಾಲೀಕರು ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಲಾರಿ ಮಾಲೀಕರು, ಕಾರು, ರಿಕ್ಷಾ ಮಾಲೀಕರು ಸಹ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಅಂಗಡಿ, ಬಸ್‌ಗಳು ಬಂದ್ ಇಲ್ಲ: ಪ್ರತಿಭಟನೆಯ ದಿನ ಬೆಳ್ಮಣ್ ಪೇಟೆಯ ಎಲ್ಲ ಅಂಗಡಿಗಳು ತೆರೆದಿರುತ್ತವೆ. ಬಸ್ ಸಹಿತ ಯಾವುದೇ ವಾಹನಗಳ ಸಂಚಾರಕ್ಕೆ ಅಡ್ಡಿ ಪಡಿಸಲಾಗುವುದಿಲ್ಲ ಪ್ರತಿ ಅಂಗಡಿಗಳ ಮುಂಭಾಗದಲ್ಲಿ ಪ್ರತಿಭಟನೆ ಮಾಹಿತಿಯುಳ್ಳ ಬ್ಯಾನರ್ ಆಳವಡಿಸಲಾಗುವುದೆಂದು ಹೋರಾಟಗಾರರು ತಿಳಿಸಿದ್ದಾರೆ.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

13 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

14 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

14 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

14 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

14 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

15 hours ago