ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಸಾಗಿಸುತ್ತಿದ್ದ ಟ್ಯಾಂಕರ್ ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದು ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಇತ್ತೀಚೆಗೆ ಸಂಭವಿಸಿದ್ದ ಈ ಅಪಘಾತದ ಸಿಸಿಟಿವಿ ದೃಶ್ಯಾವಳಿ ಇದೀಗ ಬಹಿರಂಗವಾಗಿದೆ.
ಸುಮಾರು 24 ಸೆಕೆಂಡುಗಳ ಸಿಸಿಟಿವಿ ವಿಡಿಯೊದಲ್ಲಿ ಎರಡು ಟ್ಯಾಂಕರ್‌ಗಳು ಟೋಲ್ ಪ್ಲಾಜಾ ಕಡೆಗೆ ಬರುತ್ತಿರುವುದು ಕಾಣಿಸುತ್ತದೆ. ಈ ವೇಳೆ ಒಂದು ಟ್ಯಾಂಕರ್ ಇದ್ದಕ್ಕಿದ್ದಂತೆ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ನೇರವಾಗಿ ಟೋಲ್ ಬೂತ್‌ಗೆ ನುಗ್ಗಿದೆ.
ಡಿಕ್ಕಿಯ ಬಳಿಕ ಟ್ಯಾಂಕರ್‌ನಿಂದ ಎಲ್‌ಪಿಜಿ ಅನಿಲ ಸೋರಿಕೆಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಟೋಲ್ ಪ್ಲಾಜಾ ಪ್ರದೇಶ ಹೊತ್ತಿ ಉರಿದಿದ್ದು, ದಟ್ಟ ಹೊಗೆ ಆವರಿಸಿತು. ಬೆಂಕಿಯ ಜ್ವಾಲೆಗಳು ಸುಮಾರು ಎರಡು ಕಿಲೋಮೀಟರ್ ದೂರದಿಂದಲೂ ಗೋಚರಿಸುತ್ತಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿ ಅವಘಡದ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲೆಯ ಎಲ್ಲಾ ಅಗ್ನಿಶಾಮಕ ದಳದ ಘಟಕಗಳು ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಅಪಘಾತದಲ್ಲಿ ಟ್ಯಾಂಕರ್ ಚಾಲಕ 40 ವರ್ಷದ ಧರ್ಮೇಂದ್ರ ದುಬೆ ಹಾಗೂ ಟೋಲ್ ಪ್ಲಾಜಾ ಸಿಬ್ಬಂದಿ ಅಲೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇತರ ಟೋಲ್ ಸಿಬ್ಬಂದಿಯಲ್ಲಿ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಐದಕ್ಕೇರಿದೆ.
ಘಟನೆಯ ಬಳಿಕ ಸಂಚಾರ ದಟ್ಟಣೆ ತಪ್ಪಿಸಲು ಟೋಲ್ ಪ್ಲಾಜಾ ಮೂಲಕ ವಾಹನಗಳನ್ನು ತಾತ್ಕಾಲಿಕವಾಗಿ ಶುಲ್ಕವಿಲ್ಲದೆ ಸಂಚರಿಸಲು ಅಧಿಕಾರಿಗಳು ಅವಕಾಶ ಮಾಡಿಕೊಟ್ಟರು. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣದ ತನಿಖೆಗಾಗಿ ತಾಂತ್ರಿಕ ತಜ್ಞರ ತಂಡವನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಹಾಗೂ ಇತರೆ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ಮುಂದುವರಿದಿದೆ.
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…