Featured

ಟ್ಯೂಷನ್ ಟೀಚರ್‌ನಿಂದಲೇ ವಿದ್ಯಾರ್ಥಿನಿ ಕಿಡ್ನ್ಯಾಪ್ ; ಆರೋಪಿ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಣೆ – vishwanews24

ಟ್ಯೂಷನ್ ಟೀಚರ್‌ನಿಂದಲೇ ವಿದ್ಯಾರ್ಥಿನಿ ಕಿಡ್ನ್ಯಾಪ್ ; ಆರೋಪಿ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಣೆ ; ಪೊಲೀಸರಿಂದ ಲುಕ್‌ಔಟ್ ನೋಟಿಸ್

ಬೆಂಗಳೂರು/ರಾಮನಗರ: ಪ್ರೀತಿ-ಪ್ರೇಮದ ಹೆಸರಿನಲ್ಲಿ ಟ್ಯೂಷನ್ ಟೀಚರ್‌ನಿಂದಲೇ 10ನೇ ತರಗತಿ ವಿದ್ಯಾರ್ಥಿನಿ ಕಿಡ್ನ್ಯಾಪ್ ಆಗಿರುವ ಘಟನೆ ನಡೆದಿದೆ.

ಕನಕಪುರ ಮೂಲದ ಬಾಲಕಿ ತಂದೆಯಿಂದ ಜೆ.ಪಿ.ನಗರ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಕನಕಪುರ ಮೂಲದ ಟ್ಯೂಷನ್ ಟೀಚರ್ ಅಭಿಷೇಕ್‌ನಿಂದ ವಿದ್ಯಾರ್ಥಿನಿ ಅಪಹರಣವಾಗಿದೆ.

ಕಳೆದ ನ.23 ರಂದು ಎಂದಿನಂತೆ ಆರೋಪಿ ಬಳಿ ಟ್ಯೂಷನ್‌ಗೆ ವಿದ್ಯಾರ್ಥಿನಿ ಬಂದಿದ್ದಳು. ಟ್ಯೂಷನ್ ಮುಗಿದು ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ರಾತ್ರಿ ಟ್ಯೂಷನ್ ಸೆಂಟರ್ ಬಳಿ ಹೋದಾಗ ಬಾಲಕಿಯನ್ನ ಟ್ಯೂಷನ್ ಟೀಚರ್ ಕರೆದೊಯ್ದಿರೋದು ಗೊತ್ತಾಗಿದೆ.

ಬಾಲಕಿಯನ್ನ ಕರೆದೊಯ್ಯುವ ವೇಳೆ ಮನೆಯ ರೂಂನಲ್ಲೇ ಮೊಬೈಲ್ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಕಳೆದ ನಲವತ್ತು ದಿನಗಳಿಂದ ಸಣ್ಣ ಸುಳಿವು ಸಿಗದಂತೆ ಅಪ್ರಾಪ್ತೆ ಜೊತೆ ತಲೆಮರೆಸಿಕೊಂಡಿದ್ದಾನೆ.

ಪೋನ್ ಬಳಕೆ ಮಾಡ್ತಿಲ್ಲ. ಪೋನ್ ಪೇ, ಗೂಗಲ್ ಪೇ, ಎಟಿಎಂ ಸೇರಿ ಆನ್ಲೈನ್ ಪೇಮೆಂಟ್ ಕೂಡ ಆರೋಪಿ ಮಾಡುತ್ತಿಲ್ಲ. ಕಳೆದ ನಲವತ್ತು ದಿನಗಳಿಂದ ಬೆಂಗಳೂರು ರಾಮನಗರ, ಕನಕಪುರ ಸೇರಿ ಹಲವು ಕಡೆ ಆರೋಪಿಗಾಗಿ ಪೊಲೀಸರು ತಲಾಶ್ ನಡೆಸಿದ್ದಾರೆ.

ಸದ್ಯ ಆರೋಪಿ ಸುಳಿವು ಕೊಟ್ಟವರಿಗೆ ಬಹುಮಾನ ನೀಡುವುದಾಗಿ ಪೊಲೀಸ್ ಪ್ರಕಟಣೆಯಲ್ಲಿ ಘೋಷಿಸಲಾಗಿದೆ. ಆರೋಪಿ ಪತ್ತೆಯಾಗದ ಹಿನ್ನೆಲೆ ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago