ಬೆಂಗಳೂರು/ರಾಮನಗರ: ಪ್ರೀತಿ-ಪ್ರೇಮದ ಹೆಸರಿನಲ್ಲಿ ಟ್ಯೂಷನ್ ಟೀಚರ್‌ನಿಂದಲೇ 10ನೇ ತರಗತಿ ವಿದ್ಯಾರ್ಥಿನಿ ಕಿಡ್ನ್ಯಾಪ್ ಆಗಿರುವ ಘಟನೆ ನಡೆದಿದೆ.
ಕನಕಪುರ ಮೂಲದ ಬಾಲಕಿ ತಂದೆಯಿಂದ ಜೆ.ಪಿ.ನಗರ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಕನಕಪುರ ಮೂಲದ ಟ್ಯೂಷನ್ ಟೀಚರ್ ಅಭಿಷೇಕ್‌ನಿಂದ ವಿದ್ಯಾರ್ಥಿನಿ ಅಪಹರಣವಾಗಿದೆ.
ಕಳೆದ ನ.23 ರಂದು ಎಂದಿನಂತೆ ಆರೋಪಿ ಬಳಿ ಟ್ಯೂಷನ್‌ಗೆ ವಿದ್ಯಾರ್ಥಿನಿ ಬಂದಿದ್ದಳು. ಟ್ಯೂಷನ್ ಮುಗಿದು ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ರಾತ್ರಿ ಟ್ಯೂಷನ್ ಸೆಂಟರ್ ಬಳಿ ಹೋದಾಗ ಬಾಲಕಿಯನ್ನ ಟ್ಯೂಷನ್ ಟೀಚರ್ ಕರೆದೊಯ್ದಿರೋದು ಗೊತ್ತಾಗಿದೆ.
ಬಾಲಕಿಯನ್ನ ಕರೆದೊಯ್ಯುವ ವೇಳೆ ಮನೆಯ ರೂಂನಲ್ಲೇ ಮೊಬೈಲ್ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಕಳೆದ ನಲವತ್ತು ದಿನಗಳಿಂದ ಸಣ್ಣ ಸುಳಿವು ಸಿಗದಂತೆ ಅಪ್ರಾಪ್ತೆ ಜೊತೆ ತಲೆಮರೆಸಿಕೊಂಡಿದ್ದಾನೆ.
ಪೋನ್ ಬಳಕೆ ಮಾಡ್ತಿಲ್ಲ. ಪೋನ್ ಪೇ, ಗೂಗಲ್ ಪೇ, ಎಟಿಎಂ ಸೇರಿ ಆನ್ಲೈನ್ ಪೇಮೆಂಟ್ ಕೂಡ ಆರೋಪಿ ಮಾಡುತ್ತಿಲ್ಲ. ಕಳೆದ ನಲವತ್ತು ದಿನಗಳಿಂದ ಬೆಂಗಳೂರು ರಾಮನಗರ, ಕನಕಪುರ ಸೇರಿ ಹಲವು ಕಡೆ ಆರೋಪಿಗಾಗಿ ಪೊಲೀಸರು ತಲಾಶ್ ನಡೆಸಿದ್ದಾರೆ.
ಸದ್ಯ ಆರೋಪಿ ಸುಳಿವು ಕೊಟ್ಟವರಿಗೆ ಬಹುಮಾನ ನೀಡುವುದಾಗಿ ಪೊಲೀಸ್ ಪ್ರಕಟಣೆಯಲ್ಲಿ ಘೋಷಿಸಲಾಗಿದೆ. ಆರೋಪಿ ಪತ್ತೆಯಾಗದ ಹಿನ್ನೆಲೆ ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…