Featured

ಟ್ರಾಕ್ಟರ್ ಮತ್ತು ಶಾಲಾ ಬಸ್ ನಡುವೆ ಭೀಕರ ಅಪಘಾತ ; ನಾಲ್ವರು ಮಕ್ಕಳು ದುರ್ಮರಣ – vishwanews24

ಟ್ರಾಕ್ಟರ್ ಮತ್ತು ಶಾಲಾ ಬಸ್ ನಡುವೆ ಭೀಕರ ಅಪಘಾತ ; ನಾಲ್ವರು ಮಕ್ಕಳು ದುರ್ಮರಣ

ಬಾಗಲಕೋಟೆ: ಟ್ರಾಕ್ಟರ್ ಮತ್ತು ಶಾಲಾ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಮೃತಪಟ್ಟು ಸುಮಾರು ಎಂಟು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಆಲಗೂರು ಗ್ರಾಮದ ಸಮೀಪ ಸಂಭವಿಸಿದೆ.

ಮೃತರನ್ನು ಗೋವಿಂದ ಜಂಬಗಿ(13), ಸಾಗರ ಕಡಕೋಳ(17), ಶ್ವೇತಾ ಪಾಟಿಲ್ (16), ಬಸವರಾಜ ಕೊಟಗಿ(17) ಎನ್ನಲಾಗಿದೆ.

ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಮುಗಿಸಿ ತಡರಾತ್ರಿ ೧೨ ಗಂಟೆಗೆ ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಆಲಗೂರು ಕಡೆಯಿಂದ ಕವಟಗಿ ಗ್ರಾಮಕ್ಕೆ ಕರೆದೊಯ್ಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ, ಘಟನೆಯಲ್ಲಿ ಓರ್ವ ಬಾಲಕಿ ಸ್ಥಳದಲ್ಲೇ ಮೃತಪಟ್ಟರೆ ಮೂವರು ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಗಾಯಗೊಂಡ ಮಕ್ಕಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

14 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

14 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago