ಟ್ರೋಲ್ ಪೇಜ್ ನಲ್ಲಿ ತುಳುನಾಡಿನ ದೈವಾರಾಧನೆಯ ಅವಹೇಳನ ; ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಕಾಮತ್ ಆಗ್ರಹ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ತುಳುನಾಡಿನ  ದೈವಾರಾಧನೆಯನ್ನು ಅವಹೇಳನ ಮಾಡುವಂತಹ ಪೋಸ್ಟ್ ಒಂದನ್ನು ತಮ್ಮ ಪೇಸ್ಬುಕ್ ಪುಟದಲ್ಲಿ ಹಾಕಿಕೊಂಡಿರುವ ವಿಚಾರದ ವಿರುದ್ಧ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಈ ಪೋಸ್ಟ್ ಕುರಿತಾಗಿ ತಮ್ಮ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ .

ಈ ರೀತಿಯಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ವ್ಯಕ್ತಿಗಳು ಮತ್ತು ಫೇಸ್ಬುಕ್ ಪೇಜ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ಪೊಲೀಸ್ ಕಮಿಷನರ್ ಹರ್ಷ ಅವರಿಗೆ ಮನವಿಯನ್ನೂ ಸಹ ಮಾಡಿಕೊಂಡಿದ್ದಾರೆ.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ವತಃ ತುಳುನಾಡಿನ ಶಾಸಕರೇ ಧ್ವನಿ ಎತ್ತಿರುವುದು ಮತ್ತು ಶಾಸಕರ ಮನವಿಗೆ ಮಂಗಳೂರು ಪೊಲೀಸ್ ಕಮಿಷನರ್ ಸಕಾರಾತ್ಮಕವಾಗಿ ಸ್ಪಂದಿಸಿರುವುದು ತುಳುನಾಡಿನ ಜನತೆಯಲ್ಲಿ ಸ್ವಲ್ಪ ಮಟ್ಟಿನ ಸಮಾಧಾನ ಮೂಡಲು ಕಾರಣವಾಗಿದೆ.

ಶಾಸಕ ಕಾಮತ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಹರ್ಷ ಅವರು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು ಕ್ರೈಮ್ ವಿಭಾಗದ ಡಿಸಿಪಿ ಅವರಿಗೆ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ವಹಿಸಿರುವುದಾಗಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಭರವಸೆ ನೀಡಿದ್ದಾರೆ.