ಮಂಗಳೂರು: ತುಳುನಾಡಿನ ದೈವಾರಾಧನೆಯನ್ನು ಅವಹೇಳನ ಮಾಡುವಂತಹ ಪೋಸ್ಟ್ ಒಂದನ್ನು ತಮ್ಮ ಪೇಸ್ಬುಕ್ ಪುಟದಲ್ಲಿ ಹಾಕಿಕೊಂಡಿರುವ ವಿಚಾರದ ವಿರುದ್ಧ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಈ ಪೋಸ್ಟ್ ಕುರಿತಾಗಿ ತಮ್ಮ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ .
ಈ ರೀತಿಯಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ವ್ಯಕ್ತಿಗಳು ಮತ್ತು ಫೇಸ್ಬುಕ್ ಪೇಜ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ಪೊಲೀಸ್ ಕಮಿಷನರ್ ಹರ್ಷ ಅವರಿಗೆ ಮನವಿಯನ್ನೂ ಸಹ ಮಾಡಿಕೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ವತಃ ತುಳುನಾಡಿನ ಶಾಸಕರೇ ಧ್ವನಿ ಎತ್ತಿರುವುದು ಮತ್ತು ಶಾಸಕರ ಮನವಿಗೆ ಮಂಗಳೂರು ಪೊಲೀಸ್ ಕಮಿಷನರ್ ಸಕಾರಾತ್ಮಕವಾಗಿ ಸ್ಪಂದಿಸಿರುವುದು ತುಳುನಾಡಿನ ಜನತೆಯಲ್ಲಿ ಸ್ವಲ್ಪ ಮಟ್ಟಿನ ಸಮಾಧಾನ ಮೂಡಲು ಕಾರಣವಾಗಿದೆ.
ಶಾಸಕ ಕಾಮತ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಹರ್ಷ ಅವರು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು ಕ್ರೈಮ್ ವಿಭಾಗದ ಡಿಸಿಪಿ ಅವರಿಗೆ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ವಹಿಸಿರುವುದಾಗಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಭರವಸೆ ನೀಡಿದ್ದಾರೆ.
ಶಿಮ್ಲಾ: ಕಂದಕಕ್ಕೆ ಉರುಳಿ ಬಿದ್ದ ಬೊಲೆರೊ ; ಏಳು ಮಂದಿ ಸಾವು ಶಿಮ್ಲಾ: ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ವಾಹನವೊಂದು ಕಂದಕಕ್ಕೆ…
ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಆರೋಪ ; ಇಬ್ಬರ ಬಂಧನ ಉಪ್ಪಿನಂಗಡಿ: ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ಈಚರ್ ಲಾರಿಯಲ್ಲಿ ಜಾನುವಾರು…
ತಾತನಿಂದ ಬಂದ ಆಸ್ತಿ ತಂದೆಯ ವೈಯಕ್ತಿಕ ಆಸ್ತಿ ; ಮೊಮ್ಮಕ್ಕಳಿಗೆ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು ಬೆಂಗಳೂರು: ಅಜ್ಜ ತನ್ನ…
RSS ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ : ಯಶ್ ಪಾಲ್ ಸುವರ್ಣ…
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…