Featured

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಕೊಪ್ಪಳ: ಟ್ರ‍್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಕೊಪ್ಪಳದ ಹುಲಿಗೆಮ್ಮ ದೇವಾಲಯಕ್ಕೆ ಭಕ್ತಾದಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಒಂದು ತುಂಗಭದ್ರಾ ಸೇತುವೆಯ ಮೇಲಿಂದ ಕೆಳಗೆಬಿದ್ದ ಪರಿಣಾಮ ಚಿಕ್ಕ ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

 

ಇದನ್ನೂ ಓದಿ: 

ದುರ್ಘಟನೆಯ ಬಗ್ಗೆ ಸಂಸದರಾದ ತುಕಾರಾಂ ಅವರೊಂದಿಗೆ ಮಾತನಾಡಿ, ಮಾಹಿತಿ ಪಡೆದುಕೊಂಡಿದ್ದೇನೆ. ಮೃತರೆಲ್ಲರೂ ಬಡ ಕುಟುಂಬಕ್ಕೆ ಸೇರಿದವರು, ಈ ಸಾವುಗಳು ಅವರ ಕುಟುಂಬದವರನ್ನು ಮತ್ತಷ್ಟು ಕಷ್ಟಕ್ಕೆ ನೂಕುವ ಹಿನ್ನೆಲೆಯಲ್ಲಿ, ಮಾನವೀಯ ನೆಲೆಯಲ್ಲಿ ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಏನಿದು ಘಟನೆ?
ಕೊಪ್ಪಳ ಜಿಲ್ಲೆಯ ಮುನಿರಾಬಾದ್  ಬಳಿ ಟ್ರ‍್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ಏಳು ಮಂದಿ ಸಾವನ್ನಪ್ಪಿದ್ದರು. ಹಿಂದಿನಿಂದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಟ್ರ‍್ಯಾಕ್ಟರ್ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಪರಿಣಾಮ ಮಗು ಸೇರಿ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

3 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

4 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

4 hours ago

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ – vishwanews24

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…

4 hours ago