ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಕ್ ಖಾನ್ ಮಗ, ಐಷಾರಾಮಿ ಹಡಗಿನ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆರ್ಯನ್ ಖಾನ್ 22 ದಿನಗಳ ನಂತರ ಇಲ್ಲಿನ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾದರು.
ಸೆಷನ್ಸ್ ನ್ಯಾಯಾಲಯವು ಬಿಡುಗಡೆ ಮೆಮೊ ನೀಡಿದ ಒಂದು ದಿನದ ನಂತರ, ಅಂದರೆ ಶನಿವಾರ 11 ಗಂಟೆ ಸುಮಾರಿಗೆ ಆರ್ಯನ್ ಜೈಲಿನಿಂದ ಹೊರಬಂದರು.
ಅಲ್ಲಿಂದ ಕಾರಿನ ಮೂಲಕ ಅವರು ಬಾಂದ್ರಾದಲ್ಲಿರುವ ತಮ್ಮ ಮನೆಗೆ ಸಾಗಿದರು.
ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು ಸಮಯ ಹಿಡಿದಿದ್ದರಿಂದ ಬಿಡುಗಡೆ ವಿಳಂಬವಾಯಿತು. ಶಾರುಕ್ ಕುಟುಂಬದ ಸ್ನೇಹಿತೆ ಮತ್ತು ನಟಿ ಜೂಹಿ ಚಾವ್ಲಾ ಅವರು ಆರ್ಯನ್ ಜಾಮೀನಿಗೆ ಭದ್ರತೆ ಒದಗಿಸಿದ್ದಾರೆ.
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…