Featured

ಡಬಲ್ ಡೆಕ್ಕರ್ ಖಾಸಗಿ ಬಸ್‌ ಗಳ ನಡುವೆ ಅಪಘಾತ  : 8 ಮಂದಿ ಸಾವು, ಹಲವರು ಗಂಭೀರ – Vishwanews24

ಡಬಲ್ ಡೆಕ್ಕರ್ ಖಾಸಗಿ ಬಸ್‌ ಗಳ ನಡುವೆ ಭೀಕರ ಅಪಘಾತ  : 8 ಮಂದಿ ಸಾವು, ಹಲವರು ಗಂಭೀರ

ಲಕ್ನೋ : ಡಬಲ್ ಡೆಕ್ಕರ್ ಖಾಸಗಿ ಬಸ್‌ ಗಳ ನಡುವೆ ನಡೆದ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿ, ಸುಮಾರು 20 ಮಂದಿ ಗಾಯಗೊಂಡ ಘಟನೆ ಸೋಮವಾರ ಮುಂಜಾನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.

ಲೋನಿ ಕತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣ್ ಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಡಬಲ್ ಡೆಕ್ಕರ್ ಬಸ್‌ಗೆ ರಸ್ತೆಬದಿಯಲ್ಲಿ ನಿಂತಿದ್ದ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ವರದಿಗಳ ಪ್ರಕಾರ ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸುಮಾರು 50 ಮಂದಿ ಪ್ರಯಾಣಿಕರಿದ್ದ ಬಸ್ ಬಿಹಾರದ ಸೀತಾಮರ್ಹಿ ಜಿಲ್ಲೆಯಿಂದ ದೆಹಲಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಗಾಯಾಳುಗಳನ್ನು ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಟ್ರಾಮಾ ಸೆಂಟರ್‌ ಹೈದರ್‌ಗಢ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

13 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

14 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

14 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

14 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

14 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago