Featured

ಡಬ್ಬಲ್ ಡೆಕ್ಕರ್‌ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ : 18 ಜನ ಪ್ರಯಾಣಿಕರ ದಾರುಣ ಸಾವು – vishwanews24

ಡಬ್ಬಲ್ ಡೆಕ್ಕರ್‌ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ : 18 ಜನ ಪ್ರಯಾಣಿಕರ ದಾರುಣ ಸಾವು

ನವದೆಹಲಿ: ಡಬ್ಬಲ್ ಡೆಕ್ಕರ್‌ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 18 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಲಕ್ನೋ ಆಗ್ರೋ ಎಕ್ಸ್‌ಪ್ರೆಸ್ ವೇಯಲ್ಲಿ ಈ ಘಟನೆ ನಡೆದಿದೆ. ಈ ಬಸ್ ಬಿಹಾರದ ಸೀತಾಮರ್ಹಿಯಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಬರುತ್ತಿತ್ತು. ಈ ವೇಳೆ ಇಂದು ಮುಂಜಾನೆ ಎಕ್ಸ್‌ಪ್ರೆಸ್‌ ವೇಯಲ್ಲಿ ಹಾಲಿನ ಟ್ಯಾಂಕರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಉತ್ತರ ಪ್ರದೇಶದ ಉನ್ನಾವೋ ಸಮೀಪ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ ಮಹಿಳೆಯೂ ಮಕ್ಕಳು ಸೇರಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಬಸ್ ಡಿಕ್ಕಿ ಹೊಡೆದ ರಭಸ ಎಷ್ಟು ತೀವ್ರವಾಗಿತ್ತೆಂದರೆ ಬಸ್‌ನಲ್ಲಿದ್ದ ಜನ ಬಸ್‌ನಿಂದ ಹೊರಗೆ ಹಾರಿ ಬಿದ್ದಿದ್ದಾರೆ. ನೆಲದ ಮೇಲೆ ದೇಹಗಳು ಪ್ರಯಾಣಿಕರ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇಂದು ಮುಂಜಾನೆ 5.15ರ ಸುಮಾರಿಗೆ ಖಾಸಗಿ ಬಸ್ ಬಿಹಾರದ ಮೋತಿಹಾರಿಯಿಂದ ದೆಹಲಿಗೆ ಆಗಮಿಸುತ್ತಿದ್ದ ವೇಳೆ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಈ ಅವಘಢದಲ್ಲಿ 18 ಜನ ಪ್ರಾಣ ಕಳೆದುಕೊಂಡಿದ್ದಾರೆ. ಜೊತೆಗೆ ಇನ್ನೂ 19 ಜನ ಗಾಯಗೊಂಡಿದ್ದಾರೆ ಎಂದು ಉನ್ನಾವೋದ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರಂಗ್ ರಥಿ ಹೇಳಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ವಿಷಾದ ವ್ಯಕ್ತಪಡಿಸಿದ್ದು, ಗಾಯಾಳುಗಳ ಚಿಕಿತ್ಸೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

16 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

16 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

16 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

20 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

20 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

20 hours ago