ಕಾಪು: ಕಾಪುವಿನ ಹಿರಿಯ ವೈದ್ಯ ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಗೌರವಾಧ್ಯಕ್ಷ, ಪ್ರಶಾಂತ್ ಹಾಸ್ಪಿಟಲ್‌ನ ಸಂಸ್ಥಾಪಕ, ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣೀಯ ಕ್ಷೇತ್ರದ ಸಾಧಕ ಡಾ| ಕೆ. ಪ್ರಭಾಕರ ಶೆಟ್ಟಿ (81) ಅವರು ಜ. 15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಸೋಮವಾರ ಬೆಳಗ್ಗೆ ಕೊಪ್ಪಲಂಗಡಿಯ ಸ್ವಗೃಹದಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದು ನೂರಾರು ಗಣ್ಯರು ಸೇರಿದಂತೆ ,ರಾಜಕೀಯ ಮುಖಂಡರು, ಅಭಿಮಾನಿಗಳು ಅಂತಿಮ ದರ್ಶನ ಪಡೆದರು.
ಸಂತಾಪ : ಡಾ| ಕೆ. ಪ್ರಭಾಕರ ಶೆಟ್ಟಿ ಅವರ ನಿಧನಕ್ಕೆ ಉಡುಪಿ ಶ್ರೀ ಪುತ್ತಿಗೆ ಮಠಾಽಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು,ಸಚಿವ ಸುನಿಲ್ ಕುಮಾರ್,ಕೋಟಾ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ, ಉದ್ಯಮಿ ಬಂಜರ ಪ್ರಕಾಶ್ ಶೆಟ್ಟಿ, ಸಹಕಾರಿ ಇಂದ್ರಾಳಿ ಜಯಕರ ಶೆಟ್ಟಿ, ಎರ್ಮಾಳು ಶಶಿಧರ ಶೆಟ್ಟಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಪಿ. ಶೆಟ್ಟಿ ಗುರ್ಮೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಕೆಪಿಸಿಸಿ ಸಂಯೋಜಕ ನವೀನ್‌ಚಂದ್ರ ಜೆ. ಶೆಟ್ಟಿ, ಮುಂಬೈಯ ಹಿರಿಯ ಪೊಲೀಸ್ ಅಧಿಕಾರಿ ದಯಾ ನಾಯಕ್, ಕಾಪು ಬಂಟರ ಸಂಘದ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾಪು ಬಿಲ್ಲವರ ಸಂಘದ ಅಧ್ಯಕ್ಷ ವಿಕ್ರಂ ಕಾಪು ಮೊದಲಾದ ಗಣ್ಯರು ಹಾಗೂ ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಆಡಳಿತಾಧಿಕಾರಿ ಆಲ್ಬನ್ ರೋಡ್ರಿಗಸ್, ಪ್ರಾಂಶುಪಾಲೆ ವರ್ಷಾ ಪ್ರಭು ಮತ್ತು ಸಿಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…