ಕೋಲ್ಕತ್ತಾ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಡಾನಾ ಚಂಡಮಾರುತ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಆಗ್ನೇಯ ರೈಲ್ವೆ ವ್ಯಾಪ್ತಿಯ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಸಂಚರಿಸುವ ೧೫೦ ಕ್ಕೂ ಹೆಚ್ಚು ಎಕ್ಸ್ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳ ಸೇವೆಯನ್ನು ಭಾರತೀಯ ರೈಲ್ವೇ ರದ್ದುಗೊಳಿಸಿದೆ.
ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್ಪ್ರೆಸ್, ಕಾಮಖ್ಯ-ಯಶವಂತಪುರ ಎಸಿ ಎಕ್ಸ್ಪ್ರೆಸ್, ಹೌರಾ-ಪುರಿ ಶತಾಬ್ದಿ ಎಕ್ಸ್ಪ್ರೆಸ್, ಹೌರಾ-ಭುವನೇಶ್ವರ ಶತಾಬ್ದಿ ಎಕ್ಸ್ಪ್ರೆಸ್ ಮತ್ತು ಹೌರಾ-ಯಶವಂತಪುರ ಎಕ್ಸ್ಪ್ರೆಸ್ ರೈಲುಗಳನ್ನು ಸೇರಿ 150 ಕ್ಕೂ ಹೆಚ್ಚು ರೈಲುಗಳನ್ನು ರದ್ದು ಮಾಡಲಾಗಿದೆ. ಅಕ್ಟೋಬರ್ 23 ಮತ್ತು ಅಕ್ಟೋಬರ್ 25 ರ ನಡುವೆ ಸಂಚರಿಸುವ ರೈಲುಗಳನ್ನು ರದ್ದುಗೊಳಿಸುವುದಾಗಿ ಆಗ್ನೇಯ ರೈಲ್ವೆ ವಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋದರೆ ಆಗ್ನೇಯ ರೈಲ್ವೆ ವಲಯದ ಮತ್ತಷ್ಟು ರೈಲುಗಳನ್ನು ರದ್ದುಗೊಳಿಸಲಾಗುತ್ತದೆ. ಪೂರ್ವ ರೈಲ್ವೆ ಅಕ್ಟೋಬರ್ 24 ರಿಂದ 25 ರವರೆಗೆ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ಹೇಳಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…