ನವದೆಹಲಿ,: ಮಕ್ಕಳನ್ನು ಕೆಟ್ಟದಾಗಿ, ಅಸಭ್ಯವಾಗಿ ತೋರಿಸುವ ಚಾನೆಲ್ ಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಎಚ್ಚರಿಕೆ ನೀಡಿದೆ.
ಡಾನ್ಸ್ ರಿಯಾಲಿಟಿ ಶೋಗಳ ಹೆಸರಿನಲ್ಲಿ ಮಕ್ಕಳನ್ನು ಅಸಭ್ಯ, ಪ್ರಚೋದನಾಕಾರಿಯಾಗಿ ಬಿಂಬಿಸುವ ಎಲ್ಲಾ ಖಾಸಗಿ ಚಾನೆಲ್ ಗಳಿಗೂ ಸಚಿವಾಲಯ ಎಚ್ಚರಿಕೆ ನೀಡಿದೆ.
ಡಾನ್ಸ್ ರಿಯಾಲಿಟಿ ಶೋ ಗಳಲ್ಲಿ ವಯಸ್ಕರು ಅಭಿನಯಿಸಿದ, ನೃತ್ಯ ಪ್ರದರ್ಶನ ನೀಡಿದ ಹಾಡುಗಳಿಗೆ ಚಿಕ್ಕ ಮಕ್ಕಳು ಅಭಿನಯಿಸುತ್ತಾರೆ. ಅದರಿಂದ ಮಕ್ಕಳು ವಯೋಸಹಜವಲ್ಲದ ವರ್ತನೆಯಲ್ಲಿ ತೊಡಗಬೇಕಾಗುತ್ತದೆ. ಇದು ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ.
ಚಾನೆಲ್ ಗಳು ತಮ್ಮ ಸ್ವಾರ್ಥಕ್ಕಾಗಿ ಮಕ್ಕಳನ್ನು ಹೀಗೆ ಅಸಭ್ಯ, ಸಮ್ಮತವಲ್ಲದ ರೀತಿಯಲ್ಲಿ ಚಿತ್ರಿಸುವುದು ಸರಿಯಲ್ಲ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಖಡಕ್ ವಾರ್ನಿಂಗ್ ನೀಡಿದೆ.
1995 ರ ಕೇಬಲ್ ಟೆಲಿವಿಶನ್ ನೆಟ್ ವರ್ಕ್ ಕಾಯ್ದೆಯಲ್ಲಿ ಹೇಳಿರುವ ನಿಯಮಗಳಿಗೆ ಎಲ್ಲಾ ಖಾಸಗಿ ಚಾನೆಲ್ ಗಳೂ ಬದ್ಧರಾಗಿರಬೇಕು ಎಂದು ಅದು ಹೇಳಿದೆ. ಈ ನಿಯಮದ ಪ್ರಕಾರ ಮಕ್ಕಳನ್ನು ಅಸಭ್ಯವಾಗಿ ಚಿತ್ರಿಸುವ ಅಥವಾ ಅವರಿಗೆ ಮಾನಿಸಿಕ ಅಥವಾ ದೈಹಿಕವಾಗಿ ಹಿಂಸೆ ನೀದುವ ಯಾವುದೇ ರೀತಿಯ ಕಾರ್ಯಕ್ರಮವನ್ನು ಮಾಡುವಂತಿಲ್ಲ ಎಂದು ಅದು ಹೇಳಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…