ಮಂಗಳೂರು: ಸಹಕಾರಿ ರಂಗದ ದಿಗ್ಗಜ,ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಮ್.ಎನ್ ರಾಜೇಂದ್ರ ಕುಮಾರ್ ಅವರಿಗೆ ಅಂತಾರಾಷ್ಟ್ರೀಯ ನಾಯಕತ್ವ ಆವಿಷ್ಕಾರದಲ್ಲಿ ಶ್ರೇಷ್ಠತೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಹೊಸ ದಿಲ್ಲಿಯ ಇನ್ಸ್ಟಿಟ್ಯುಟ್ ಆಫ್ ಎಕನಾಮಿಕ್ ಸ್ಟಡೀಸ್ ಸಂಸ್ಥೆ ಶ್ರೀಲಂಕಾದ ಹೋಟೆಲ್ ತಾಜ್ ಸಮುದ್ರದಲ್ಲಿ ಡಿಸೆಂಬರ್ ೨೭ ರಂದು ಆಯೋಜಿಸಿರುವ ಇಂಡೋ-ಶ್ರೀಲಂಕಾ ಎಕನಾಮಿಕ್ ಕೋ-ಆಪರೇಶನ್ ಕಾನ್ಫರೆನ್ಸ್ ನಲ್ಲಿ ಡಾ.ಎಮ್.ಎನ್.ರಾಜೇಂದ್ರ ಕುಮಾರ್ ಈ ಪ್ರಶಸ್ತಿ ಸ್ವೀಕರಸಲಿದ್ದಾರೆ.
ಸಹಕಾರಿ ರಂಗದಲ್ಲಿ ಹೊಸ ಆವಿಷ್ಕಾರದೊಂದಿಗೆ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ ,ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಗೆ ಘನತೆ ತಂದುಕೊಟ್ಟ ಇವರು ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ತಂದು ಕೊಟ್ಟಿದ್ದಾರೆ.
25 ವರ್ಷಗಳಿಂದ ಸಮರ್ಥ ನಾಯಕತ್ವದಿಂದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ್ನು ೨೫ ವರ್ಷಗಳಿಂದ ಮುನ್ನಡೆಸುತ್ತಿರುವ ಇವರು ಈ ಬ್ಯಾಂಕ್ ನ್ನು ಜನಸ್ನೇಹಿ ಬ್ಯಾಂಕನ್ನಾಗಿ ರೂಪಿಸಿದ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ.
ಇವರು ಅಧ್ಯಕ್ಷರಾದ ಬಳಿಕ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿಗೆ 19 ವರ್ಷಗಳಿಂದ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಹಾಗೂ 17 ವರ್ಷಗಳಿಂದ ನಬಾರ್ಡ್ ಪ್ರಶಸ್ತಿ ಲಭಿಸಿದೆ.
ಸಹಕಾರಿ ರಂಗದಲ್ಲಿ ವಿಶಿಷ್ಟ ಸಾಧನೆಗೆ ಹಲವು ಅಂತರಾಷ್ಟ್ರೀಯ ಪ್ರಸಸ್ತಿಗಳು ಮತ್ತು ಕರ್ನಾಟಕ ಸರ್ಕಾರ ನೀಡಿದ ಸಹಕಾರ ರತ್ನ ಪ್ರಶಸ್ತಿಯೂ ಒಲಿದು ಬಂದಿದೆ.
ವರದಿ: ಪುರುಷೋತ್ತಮ ಸಾಲಿಯಾನ್, ವಿಶ್ವನ್ಯೂಸ್24
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…