ಉಡುಪಿ: ಕರಾವಳಿ ಪ್ರವಾಸದಲ್ಲಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಉಡುಪಿಯಲ್ಲಿ ಹಿಂದು ಸಾಮ್ರಾಟ್ ಎಂಬ ಬಿರುದು ಹಾಗೂ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಮೋಹನ್ ಭಾಗವತ್ ಅವರು ಉಡುಪಿ ಜಿಲ್ಲೆಗೆ ಭಾನುವಾರ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಗೀತಾಮಂದಿರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಹಿಂದು ಸಾಮ್ರಾಟ್ ಎಂಬ ಬಿರುದು ಹಾಗೂ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಶ್ರೀಕೃಷ್ಣ ದರ್ಶನದ ಬಳಿಕ ಡಾ ಭಾಗವತ್ ಗೀತಾಮಂದಿರಕ್ಕೆ ಭೇಟಿ ನೀಡಿದರು .ಶ್ರೀಗಳು ಅಲ್ಲಿನ ಗೀತಾಶಿಲಾ ಲೇಖನ ಧ್ಯಾನ ಮಂದಿರ ,ವಾದಿರಾಜ ಸಂಶೋಧನ ಮಂದಿರಗಳನ್ನು ಪರಿಚಯಿಸಿ ನಡೆಸುತ್ತಿರುವ ಚಟುವಟಿಕೆಗಳನ್ನು ವಿವರಿಸಿದರು. ತಮ್ಮ ಚತುರ್ಥ ಪರ್ಯಾಯಾವಧಿಯ ಅತ್ಯಂತ ದೂರದೃಷ್ಟಿಯ ಕೋಟಿ ಗೀತಾಲೇಖನ ಯಜ್ಞದ ಕುರಿತೂ ವಿವರಿಸಿದರು.
ಸಂಘದ ಹಿರಿಯ ಮುಖಂಡ ಮುಕುಂದ ಜೀ ,ಉಡುಪಿಯ ಪ್ರಮುಖ್ ನರತನ್ ಶೆಣೈ,ಮಠದ ದಿವಾನರಾದ ಎಂ ನಾಗರಾಜ ಆಚಾರ್ಯ ,ಮಟ್ಟಿ ಲಕ್ಷ್ಮಿನಾರಾಯಣ ರಾವ್,ಪ್ರಮೋದ್ ಸಾಗರ್ ಸಂತೋಷ್ ಶೆಟ್ಟಿ ,,ಶ್ರೀ ಮಠದ ವೈದಿಕ ವಿದ್ವಾಂಸರು,ಗಣ್ಯ ನಾಗರಿಕರು ಮೊದಲಾದವರು ಭಾಗವಹಿಸಿದ್ದರು.
ಆರಂಭದಲ್ಲಿ ಮಠದ ಮುಂಭಾಗದಲ್ಲಿ ಭಾಗವತ್ ಅವರನ್ನು ವಾದ್ಯ, ಚಂಡೆವಾದನ ಮಂತ್ರಘೋಷ ಸಹಿತ ಮಠದ ಸಾಂಪದ್ರದಾಯಿಕ ಗೌರವಗಳೊಂದಿಗೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…
ಪುತ್ತೂರು: ಕೋಮು ಪ್ರಚೋದನೆ ಆರೋಪ ; 7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…
ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…