ಬೆಂಗಳೂರು: ಈ ಬಾರಿಯ ಡಾ. ವಿಷ್ಣುವರ್ಧನ್ ರಾಷ್ಟ್ರ ಪ್ರಶಸ್ತಿಗೆ ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಾಹಸ ಸಿಂಹ ವಿಷ್ಣುವರ್ಧನ್ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತ ಬಂದಿದ್ದು, 2019ನೇ ಸಾಲಿನ ಪ್ರಶಸ್ತಿಯನ್ನು ರಮೇಶ್ ಅರವಿಂದ್ ಅವರಿಗೆ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ.
ವೀರಕಪುತ್ರ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಡಾ. ವಿಷ್ಣು ಸೇನಾ ಸಮಿತಿಯು 2017ರಿಂದ ಪ್ರತಿ ವರ್ಷ ಒಬ್ಬರಿಗೆ ವಿಷ್ಣುವರ್ಧನ್ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ ನೀಡುತ್ತ ಬಂದಿದೆ. ವಿಷ್ಣುವರ್ಧನ್ ಅವರ 69ನೇ ಜನ್ಮದಿನದ ಪ್ರಯುಕ್ತ ಸೆ.18 ರಿಂದ 20 ರ ತನಕ ಮೂರು ದಿನಗಳ ಕಾಲ ನಡೆಯಲಿರುವ ಡಾ. ವಿಷ್ಣುವರ್ಧನ್ ನಾಟಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಸಂಜೆ 4.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸದರಿ ಪ್ರಶಸ್ತಿಯು ಅಭಿನಂದನಾ ಪತ್ರ, ಪ್ರಶಸ್ತಿ ಫಲಕ, ಫಲ- ಪುಷ್ಪಗಳ ಸಹಿತ 25 ಸಾವಿರ ರು. ನಗದನ್ನು ಒಳಗೊಂಡಿದೆ ಎಂದು ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…